ಚೆನ್ನೈ;- ತಮಿಳುನಾಡಿಗೆ ನೀರು ಬಿಡುವುದರ ವಿರುದ್ಧ ಕರ್ನಾಟಕ ದೋಷಪೂರಿತ ವಾದ ಮಾಡುತ್ತಿದೆ ಎಂದು ತಮಿಳುನಾಡು ಸಿಎಂ MK ಸ್ಟಾಲಿನ್ ಹೇಳಿದ್ದಾರೆ
ಈ ಸಂಬಂಧ ಮಾತನಾಡಿದ ಅವರು,ತಮಿಳುನಾಡಿಗೆ ನೀರು ಬಿಡುವುದರ ವಿರುದ್ಧ ಕರ್ನಾಕಟವು ದೋಷಪೂರಿತ ಮತ್ತು ಆಧಾರರಹಿತ ವಾದಗಳನ್ನು ಮಾಡುತ್ತಿದೆ. ಆದರೆ ಇದನ್ನೆಲ್ಲ ಪರಿಗಣಿಸಬಾರದು. ಹೀಗಾಗಿ ತಮಿಳುನಾಡಿಗೆ 12,500 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಸೂಚಿಸುವಂತೆ ಕೋರಲಾಗುವುದು ಎಂದು ಸ್ಟಾಲಿನ್ ತಿಳಿಸಿದ್ದಾರೆ.
ರಾಜ್ಯದ ಎಲ್ಲ ಪಕ್ಷಗಳ ಸಂಸದರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, ರಾಜ್ಯಕ್ಕೆ ಕಾವೇರಿ ನೀರು ಬಿಡುವಂತೆ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಿದ್ದಾರೆ. ರಾಜ್ಯ ಜಲ ಸಂಪನ್ಮೂಲ ಸಚಿವ ದುರೈಮುರುಗನ್ ಈ ನಿಯೋಗದ ನೇತೃತ್ವ ವಹಿಸಲಿದ್ದಾರೆ ಎಂದು ಸ್ಟಾಲಿನ್ ಹೇಳಿದ್ದಾರೆ.
ಈ ವರ್ಷದ ಸೆ.14ರವರೆಗೆ ರಾಜ್ಯಕ್ಕೆ 103.5 ಟಿಎಂಸಿ ಅಡಿ ನೀರು ಬಿಡಗಡೆಯಾಗಬೇಕಿತ್ತು. ಆದರೆ ಕೇವಲ 38.4 ಟಿಎಂಸಿ ಅಡಿ ನೀರು ಬಿಡಲಾಗಿದ್ದು ಇನ್ನೂ 65.1 ಟಿಎಂಸಿ ಅಡಿ ನೀರು ನಮಗೆ ಕೊರತೆಯಾಗಿದೆ ಎಂದು ತಿಳಿಸಿದ್ದಾರೆ.