ಭುವನೇಶ್ವರ್: ಚೈತ್ರಾ ಕುಂದಾಪುರ ಪ್ರಕರಣದಲ್ಲಿ ದಿನ ಹೊದಂತೆ ತಿರುವುಗಳು ಪಡೆದುಕೊಳ್ಳುತ್ತಿದೆ. ಹೌದು MLA ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹಾಲಶ್ರೀ ಕೊನೆಗೆ ಸಿಕ್ಕಿದ್ದಿದ್ದಾನೆ. ಕಳೆದ ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆಯ ಅಭಿನವ ಹಾಲಶ್ರೀಯನ್ನು ಇಂದು ಒಡಿಶಾದ ಕಟಕ್ನಲ್ಲಿ ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಆರೋಪಿ ಹಾಲಶ್ರೀ ಫೋನ್ ಬಳಸದೆ ಪದೇ ಪದೇ ಇರುವ ಸ್ಥಳ ಬದಲಾಯಿಸುತ್ತಿದ್ದು, ಬಂಧನಕ್ಕೆ ಸ್ವಲ್ಪ ಕಷ್ಟವಾಗಿತ್ತು. ಆದರೆ ಇದೀಗ ಆರೋಪಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿರುವುದು ಖಚಿತವಾಗಿದೆ. ಸ್ವಾಮೀಜಿಗಾಗಿ ಪ್ರತ್ಯೇಕವಾಗಿ ಎರಡು ತಂಡಗಳು ಕಾರ್ಯಚರಣೆ ನಡೆಸುತ್ತಿದ್ದವು. ಕಟಕ್ ಬಳಿ ರೈಲಿನಲ್ಲಿ ಭುವನೇಶ್ವರದಿಂದ ಬೋಧ್ಗಯಾಗೆ ತೆರಳುತ್ತಿದ್ದ ವೇಳೆ ಹಾಲಶ್ರೀಯನ್ನು ಸಿಸಿಬಿ ಪೊಲೀಸರು ಹಿಡಿದಿದ್ದಾರೆ.
ಒಡಿಶಾ ಪೊಲೀಸರ ಸಹಕಾರದಿಂದ ಹಾಲಶ್ರೀಯನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದು, ಇಂದು ರಾತ್ರಿ ಬೆಂಗಳೂರಿಗೆ ಕರೆತರಲಿದ್ದು, ಚೈತ್ರಾ ಕುಂದಾಪುರ ಹೇಳಿದಂತೆ ವಿಚಾರಣೆ ವೇಳೆ ಸ್ವಾಮೀಜಿ ದೊಡ್ಡ ದೊಡ್ಡವರ ಹೆಸರು ಬಾಯ್ಬಿಡುತ್ತರಾ ಎನ್ನುವ ಕುತೂಹಲ ಮೂಡಿಸಿದೆ. ಅಲ್ಲದೇ ಆ ದೊಡ್ಡ ದೊಡ್ಡವರು ಯಾರ್ಯಾರು ಎನ್ನುವುದನ್ನು ಕಾದುನೋಡಬೇಕಿದೆ.