ನವದೆಹಲಿ;- ಬರಗಾಲ ಎದುರಿಸುತ್ತಿರುವ ಕರ್ನಾಟಕ ಮುಂದಿನ ಕಾನೂನು ಹೋರಾಟದ ಕುರಿತು ಚರ್ಚಿಸಲು ನವದೆಹಲಿಯಲ್ಲಿ ಇಂದು ಸಭೆಯನ್ನು ನಡೆಸಲಿದೆ.
ಡಿ. ಕೆ. ಶಿವಕುಮಾರ್ ಮಂಗಳವಾರ ಮಧ್ಯಾಹ್ನವೇ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾತ್ರಿ ದೆಹಲಿಗೆ ತೆರಳಿದರು. ವಿವಿಧ ಸಚಿವರು ಸಹ ದೆಹಲಿಯಲ್ಲಿದ್ದಾರೆ.
ಮಂಗಳವಾರ ರಾತ್ರಿ ಡಿ. ಕೆ. ಶಿವಕುಮಾರ್ ಧಾರವಾಡ ಸಂಸದ, ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ಭೇಟಿ ಮಾಡಿದರು. ಕಾವೇರಿ ನೀರು ಹರಿಸುವ ವಿಚಾರದಲ್ಲಿನ ಬೆಳವಣಿಗೆಗಳ ಕುರಿತು ಚರ್ಚೆಯನ್ನು ನಡೆಸಿದರು. ಟಿ. ಬಿ. ಜಯಚಂದ್ರ, ಸಂಸದ ಡಿ.ಕೆ. ಸುರೇಶ್, ಜಿ. ಸಿ. ಚಂದ್ರಶೇಖರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇನ್ನೂ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ವಿವಿಧ ಖಾತೆಗಳ ಸಚಿವರು ನವದೆಹಲಿಯ ಖಾಸಗಿ ಹೋಟೆಲ್ನಲ್ಲಿ ಕಾವೇರಿ ವಿವಾದ ಕಾನೂನು ಹೋರಾಟದ ಕುರಿತು ಕಾನೂನು ತಜ್ಞರ ಜೊತೆ ಸಭೆಯನ್ನು ನಡೆಸಲಿದ್ದಾರೆ.