ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡದ ಗೆಲುವಿನ ರೂವಾರಿಯಾಗಿ ಮಿಂಚಿದ ವೇಗಿ ಮೊಹಮದ್ ಸಿರಾಜ್ ಐಸಿಸಿ ಏಕದಿನ ಬೌಲಿಂಗ್ ರ್ಯಾಂಕಿಂಗ್ನಲ್ಲಿ ವಿಶ್ವ ನಂ. 1 ಪಟ್ಟಕ್ಕೆ ಮರಳಿದ್ದಾರೆ.
ಕಳೆದ ಜನವರಿಯಲ್ಲಿ ಮೊದಲ ಬಾರಿಗೆ ವಿಶ್ವ ನಂ. 1 ಪಟ್ಟಕ್ಕೇರಿದ್ದ ಸಿರಾಜ್, ಮಾರ್ಚ್ನಲ್ಲಿ ಆಸ್ಟ್ರೆಲಿಯಾದ ವೇಗಿ ಜೋಶ್ ಹ್ಯಾಸಲ್ವುಡ್ಗೆ ಅಗ್ರಸ್ಥಾನ ಬಿಟ್ಟುಕೊಟ್ಟಿದ್ದರು. ಏಷ್ಯಾಕಪ್ಗೆ ಮುನ್ನ ಸಿರಾಜ್ ರ್ಯಾಂಕಿಂಗ್ನಲ್ಲಿ 9ನೇ ಸ್ಥಾನಕ್ಕೆ ಕುಸಿತ ಕಂಡಿದ್ದರು. ಆದರೆ ೈನಲ್ ಪಂದ್ಯದಲ್ಲಿ 6 ವಿಕೆಟ್ ಗೊಂಚಲು ಪಡೆದು ಶ್ರೀಲಂಕಾವನ್ನು ಕೇವಲ 50 ರನ್ಗೆ ಆಲೌಟ್ ಮಾಡಿ ಕಂಗೆಡಿಸಿದ ಸಿರಾಜ್ ಟೂರ್ನಿಯಲ್ಲಿ ಆಡಿದ 5 ಪಂದ್ಯಗಳಲ್ಲಿ 10 ವಿಕೆಟ್ ಕಬಳಿಸಿದ ಸಾಧನೆಯಿಂದ ರ್ಯಾಂಕಿಂಗ್ನಲ್ಲಿ ಬರೋಬ್ಬರಿ 8 ಸ್ಥಾನ ಪ್ರಗತಿ ಕಂಡಿದ್ದಾರೆ. ಹ್ಯಾಸಲ್ವುಡ್ 2ನೇ ಮತ್ತು ನ್ಯೂಜಿಲೆಂಡ್ನ ಟ್ರೆಂಟ್ ಬೌಲ್ಟ್ 3ನೇ ಸ್ಥಾನಕ್ಕೆ ಕುಸಿದಿದ್ದಾರೆ.