ನವದೆಹಲಿ: ತಮಿಳುನಾಡಿಗೆ ಕೆಆರ್ಎಸ್ನಿಂದ 5000 ಕ್ಯೂಸೆಕ್ ನೀರು ಹರಿಸಬೇಕೆಂದು ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಹೀಗಾಗಿ ಕರ್ನಾಟಕಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಕರ್ನಾಟಕದಲ್ಲಿ ತೀವ್ರ ಮಳೆ ಅಭಾವದ ಹಿನ್ನೆಲೆಯಲ್ಲಿಯೂ ತಮಿಳುನಾಡು ನಮಗೆ ಸಾಮಾನ್ಯ ವರ್ಷಗಳಂತೆ ನೀರು ಹರಿಸುವಂತೆ ಪಟ್ಟು ಹಿಡಿದಿದ್ದು, ಕರ್ನಾಟಕ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಈ ಬಗ್ಗೆ ಕರ್ನಾಟಕ ಹಾಗೂ ತಮಿಳುನಾಡು ಪರ ವಕೀಲರು ಪರಸ್ಪರ ವಾದ ಮಂಡಿಸಿದ್ದಾರೆ.
ಇಲ್ಲಿದೆ ನೋಡಿ ಪರಸ್ಪರ ವಾದಗಳನ್ನು ಆಲಿಸಿದ ಸುಪ್ರೀಂ ಕೋರ್ಟ್ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ 5000 ಕ್ಯೂಸೆಕ್ಸ್ ನೀಡು ಬಿಡುವಂತೆ ಆದೇಶ ಹೊರಡಿಸಿದೆ. ಇದಾದ ನಂತರ ನೀರಿನ ಲಭ್ಯತೆಯ ವಾಸ್ತವಾಂಶವನ್ನು ನೋಡಿಕೊಂಡು ಮುಂದಿನ ತೀರ್ಮಾನಗಳನ್ನು ಕೈಗೊಳ್ಳಲಾಗುವುದು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು 15 ದಿನಗಳಿಗೊಮ್ಮೆ ಸಭೆಯನ್ನು ಮಾಡಬೇಕು. ಎರಡೂ ರಾಜ್ಯಗಳು ಪ್ರಾಧಿಕಾರದ ಆದೇಶವನ್ನು ಪಾಲಿಸಬೇಕು ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಗವಾಯ್ ಆದೇಶ ಹೊರಡಿಸಿದ್ದಾರೆ.