ಆಸ್ಟ್ರೇಲಿಯಾ ಎದುರಿನ ಎರಡನೇ ಏಕದಿನ ಪಂದ್ಯದಲ್ಲಿ 99 ರನ್ಗಳ ಅಂತರದಿಂದ ಜಯ ಗಳಿಸುವ ಮೂಲಕ ಭಾರತ ಸರಣಿ ತನ್ನದಾಗಿಸಿಕೊಂಡಿದೆ. ಆರಂಭದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಭಾರತ 50 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 399 ರನ್ ಗಳಿಸಿತ್ತು.
ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾಕ್ಕೆ ಮಳೆ ಅಡ್ಡಿಪಡಿಸಿದ್ದರಿಂದ ಡಕ್ವರ್ಥ್ ಲೂಯಿಸ್ ನಿಯಮದಂತೆ 33 ಓವರ್ ಗಳಲ್ಲಿ 317 ರನ್ಗಳ ಪರಿಷ್ಕೃತ ಗುರಿ ನೀಡಲಾಗಿತ್ತು. ಅಂತಿಮವಾಗಿ ಆಸ್ಟ್ರೇಲಿಯಾ ತಂಡ 28.2 ಓವರ್ಗಳಲ್ಲಿ 217 ರನ್ ಗಳಿಗೇ ಆಲ್ ಔಟ್ ಆಯಿತು.