ಲಕ್ನೋ: ಪತ್ನಿಯ (Wife) ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿದ (Gang Rape) ಪರಿಣಾಮ ವಿಷ (Poison) ಸೇವಿಸಿ ದಂಪತಿ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಉತ್ತರಪ್ರದೇಶದ (Uttar Pradesh) ಬಸ್ತಿ ಜಿಲ್ಲೆಯಲ್ಲಿ ನಡೆದಿದೆ.
30 ವರ್ಷದ ಪತಿ ಮತ್ತು 27 ವರ್ಷದ ಪತ್ನಿ ಗುರುವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ (Husband) ಅದೇ ದಿನ ಮೃತಪಟ್ಟರೆ, ಪತ್ನಿ ಶುಕ್ರವಾರ ಗೋರಖ್ಪುರದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಘಟನೆಯ ಕುರಿತು ಎಫ್ಐಆರ್ ದಾಖಲಿಸಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ ಎಂದು ಬಸ್ತಿ ಎಸ್ಪಿ ಗೋಪಾಲ ಕೃಷ್ಣ ಶನಿವಾರ ತಿಳಿಸಿದ್ದಾರೆ.
ಸೆಪ್ಟೆಂಬರ್ 21ರ ಮಧ್ಯರಾತ್ರಿ ಇಬ್ಬರು ದುಷ್ಕರ್ಮಿಗಳು ಮನೆಗೆ ನುಗ್ಗಿ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ದಂಪತಿಯ ಸಂಬಂಧಿಕರು ಆರೋಪಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ದಂಪತಿ ಆರೋಪಿಗಳ ಹೆಸರನ್ನು ನಮೂದಿಸಿ ವಿಡಿಯೋವೊಂದನ್ನು ರೆಕಾರ್ಡ್ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.