ವಾಷಿಂಗ್ಟನ್: ಕೆನಡಾದಲ್ಲಿ ಖಲಿಸ್ತಾನಿ ಭಯೋತ್ಪಾದಕ (Khalistani Terrorist) ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪದ ನಂತರ ಭಾರತ ಹಾಗೂ ಕೆನಡಾ (India And Canada) ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಸೃಷ್ಟಿಯಾಗಿದೆ. ಈ ಬೆನ್ನಲ್ಲೇ ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ (Jake Sullivan) ಕೆನಡಾ ಬೆಂಬಲಿಸಿ ಹೇಳಿಕೆ ನೀಡಿದ್ದಾರೆ.
ಅಮೆರಿಕದ (USA) ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಈ ಬಗ್ಗೆ ಮಾತನಾಡಿದ್ದು, ಈ ವಿಷಯದ ಬಗ್ಗೆ ಈಗಾಗಲೇ ನಡೆದಿರುವ ಹಾಗೂ ನಡೆಯಲಿರುವ ಖಾಸಗಿ ರಾಜತಾಂತ್ರಿಕ ಮಾತುಕತೆಯ ನಡುವೆ ನಾನು ಮಧ್ಯಪ್ರವೇಶಿಸುವುದಿಲ್ಲ. ಈ ವಿಷಯ ಬಗ್ಗೆ ಭಾರತದ ಉನ್ನಮಟ್ಟದ ಅಧಿಕಾರಿಗಳೊಂದಿಗೆ ಸಂಪರ್ಕದಲಿದ್ದೇವೆ ಮತ್ತು ಇರುತ್ತೇವೆ ಎಂದು ಹೇಳಿದ್ದಾರೆ
ಇದೇ ವೇಳೆ ಯುಎಸ್ ಅಧ್ಯಕ್ಷ ಜೋ ಬೈಡನ್ (Joe Beden) ಅವರು ರಾಜತಾಂತ್ರಿಕ ವಿವಾದದ ಕುರಿತು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೊಂದಿಗೆ ಮಾತನಾಡಲು ಉದ್ದೇಶಿಸಿದ್ದಾರೆಯೇ? ಎಂಬ ಪ್ರಶ್ನೆಗೆ ಉತ್ತರಿಸಿ, ಬೈಡನ್ ಆಡಳಿವು ಕೆನಡಾದ ಆರೋಪಗಳನ್ನ ಗಂಭೀರವಾಗಿ ತೆಗೆದುಕೊಂಡಿದೆ. ಒಟ್ಟಾವಾದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದೆ ಎಂದು ತಿಳಿಸಿದ್ದಾರೆ.