ಕಾವೇರಿ ನೀರಿಗಾಗಿ ರೈತರು, ಕನ್ನಡಪರ ಹೋರಾಟಗಾರರು ಹಾಗೂ ಕನ್ನಡ ಚಿತ್ರರಂಗದ ನಟರು ಈಗಾಗಲೇ ಧ್ವನಿ ಎತ್ತಿದ್ದಾರೆ. ಇದೀಗ ಭಾರತ ಕ್ರಿಕೆಟ್ ತಂಡದ ಆಟಗಾರ, ಕನ್ನಡಿಗ ಕೆ.ಎಲ್ ರಾಹುಲ್ ಸಹ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.
ಈ ಕುರಿತು Xನಲ್ಲಿ ಪೋಸ್ಟ್ ಮಾಡಿರುವ ಅವರು, ‘ಕಾವೇರಿ ಎಂದೂ ನಮ್ಮದು. ಕಾವೇರಿ ಹುಟ್ಟುವುದು, ಅತಿ ಹೆಚ್ಚು ನೀರು ಸಂಗ್ರಹವಾಗುವುದು ಕರ್ನಾಟಕದಲ್ಲಿ. ಆದರೆ, ಆ ನೀರನ್ನು ಬಳಸಿಕೊಳ್ಳಲು ಪ್ರತಿ ವರ್ಷ ಕಾನೂನು ಹೋರಾಟದ ಜತೆಗೆ ಬೀದಿಗಿಳಿದು ಪ್ರತಿಭಟನೆ ಮಾಡಬೇಕಾದ ಅನಿವಾರ್ಯ ಕನ್ನಡಿಗರದು. ಇದು ನಮ್ಮ ದುರಂತ. ಕಾವೇರಿ ಇಡೀ ಕರ್ನಾಟಕದ ಆಸ್ತಿ’ ಎಂದು ಹೇಳಿದ್ದಾರೆ.