ನವದೆಹಲಿ: ಇಲ್ಲಿನ ಆಜಾದ್ಪುರದಲ್ಲಿರುವ ಏಷ್ಯಾದ ಅತಿದೊಡ್ಡ ಹಣ್ಣು ಮತ್ತು ತರಕಾರಿ ಮಾರುಕಟ್ಟೆಯಲ್ಲಿ (Delhi Azadpur Market) ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಮೂಲಗಳ ಪ್ರಕಾರ, ಶುಕ್ರವಾರ ಸಂಜೆ 5:20 ಗಂಟೆ ವೇಳೆಗೆ ಮಾರುಕಟ್ಟೆಯ ಟೊಮೆಟೊ ಶೆಡ್ನಲ್ಲಿ ಬೆಂಕಿ (Fire) ಕಾಣಿಸಿಕೊಂಡಿದ್ದು, ಹತ್ತಾರು ಮಳಿಗೆಗಳು ಹೊತ್ತಿ ಉರಿಯುತ್ತಿವೆ
ಸದ್ಯ 11 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿವೆ. ಆದ್ರೆ ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ. ಜೊತೆಗೆ ಸಾವು-ನೋವು ಉಂಟಾಗಿಲ್ಲ ಎಂದು ಸ್ಥಳೀಯ ಅಧಿಕಾರಿಗಳು ತಿಳಿದ್ದಾರೆ.