ಕನ್ನಡದ ಬಿಗ್ ಬಾಸ್ ಸೀಸನ್ 10 ಅಕ್ಟೋಬರ್ 8 ರಿಂದ ಅದ್ಧೂರಿಯಾಗಿ ಶುರುವಾಗಲಿದೆ. ಬಿಗ್ ಬಾಸ್ ಪ್ರಸಾರವಾಗುವ ಮುನ್ನ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಹತ್ತು ಹಲವಾರು ವಿಷಯಗಳನ್ನು ಹಂಚಿಕೊಂಡಿತು ಕಲರ್ಸ್ ಕನ್ನಡ ವಾಹಿನಿ. ಸಹಜವಾಗಿ ಈ ಬಾರಿ ಗೆದ್ದವರಿಗೆ ಎಷ್ಟು ಮೊತ್ತದ ಬಹುಮಾನ (Prize) ಸಿಗಲಿದೆ ಎನ್ನುವ ಕುತೂಹಲ ಎಲ್ಲರದ್ದಾಗಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ.
ಪ್ರತಿ ಸಲವೂ ಬಿಗ್ ಬಾಸ್ ಗೆದ್ದವರಿಗೆ ಟ್ರೋಫಿ ಮತ್ತು ಭಾರೀ ಮೊತ್ತದ ಹಣವನ್ನೇ ಬಹುಮಾನವಾಗಿ ನೀಡಲಾಗುತ್ತದೆ. ಜೊತೆಗೆ ಇತರ ಬಹುಮಾನಗಳು ಕೂಡ ಇರಲಿವೆ. ಈ ಬಾರಿ ಬಿಗ್ ಬಾಸ್ ಗೆದ್ದವರಿಗೆ ಐವತ್ತು ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ವಾಹಿನಿಯು ತಿಳಿಸಿದೆ. ಜೊತೆಗೆ ಇತರ ಬಹುಮಾನಗಳು ಕೂಡ ಮುಂದುವರೆಯಲಿವೆ.
ಬಿಗ್ ಬಾಸ್ ಮನೆಗೆ ಹೋಗುವ ಮುನ್ನವೇ ವಾಹಿನಿಯಾಗಲಿ, ಬಿಗ್ ಬಾಸ್ ಮನೆ ಪ್ರವೇಶ (Bigg Boss House) ಮಾಡುವ ಸ್ಪರ್ಧಿಗಳಾಗಲೀ ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡುವ ವಿಚಾರವನ್ನು ರಿವೀಲ್ ಮಾಡೋದಿಲ್ಲ. ಸ್ಪರ್ಧಿಗಳು ಯಾರು ಅನ್ನೋದು ಬಿಗ್ ಬಾಸ್ ಶೋ ಲಾಂಚ್ ಆಗುವ ದಿನವೇ ಗೊತ್ತಾಗುತ್ತದೆ. ಆದರೆ ಈ ಬಾರಿ ಮೊದಲ ಬಾರಿಗೆ ಸೋಶಿಯಲ್ ಮೀಡಿಯಾದಲ್ಲಿ ಸ್ಪರ್ಧಿ ಯಾರು ಅನ್ನೋದನ್ನು ಇದೀಗ ವಾಹಿನಿ ಹೇಳಿದೆ.