ತೇಜಸ್ವಿನಿ ಪ್ರಕಾಶ್ (Tejaswini Prakash) ಇದೀಗ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಪತಿ ಜೊತೆ ಕ್ಯಾಮೆರಾ ಕಣ್ಣಿಗೆ ಪೋಸ್ ಕೊಡುತ್ತಿರುವ ಬೇಬಿ ಬಂಪ್ ಫೋಟೋವನ್ನ ನಟಿ ಹಂಚಿಕೊಂಡಿದ್ದಾರೆ.
ತಾಯಿಯಾಗುತ್ತಿರುವ ವಿಚಾರವನ್ನು ಇತ್ತೀಚೆಗೆ ತೇಜಸ್ವಿನಿ ಸೋಶಿಯಲ್ ಮೀಡಿಯಾದಲ್ಲಿ ಅನೌನ್ಸ್ ಮಾಡಿದ್ದರು. ಈಗ ಮತ್ತೆ ಬೇಬಿ ಬಂಪ್ ಫೋಟೋವನ್ನು ನಟಿ ಶೇರ್ ಮಾಡಿದ್ದಾರೆ.
ಪತಿ ಫಣಿ ವರ್ಮಾ ಕಪ್ಪು ಉಡುಗೆಯಲ್ಲಿ ಮಿಂಚಿದ್ರೆ, ನಟಿ ಗೌನ್ ಧರಿಸಿ ಬೇಬಿ ಬಂಪ್ ಲುಕ್ ತೋರಿಸಿದ್ದಾರೆ.
ಕೆಲ ದಿನಗಳ ಹಿಂದೆ ಬೇಬಿ ಬಂಪ್ ಫೋಟೋ ಶೇರ್ ಮಾಡಿ ಪತಿಯ ಹುಟ್ಟುಹಬ್ಬಕ್ಕೆ ವಿಶೇಷವಾಗಿ ನಟಿ ಶುಭಕೋರಿದ್ದರು.
ನಮ್ಮ ಮಗು ಸಂತೋಷದಿಂದ ಹೊಳೆಯುತ್ತಿದ್ದು, ನಾವು ನಮ್ಮ ಜೀವನದ ಅತ್ಯಂತ ಅಮೂಲ್ಯ ಉಡುಗೊರೆಯನ್ನು ಸ್ವೀಕರಿಸಲಿದ್ದೇವೆ.
ಜನ್ಮದಿನದ ಶುಭಾಶಯಗಳು ಗಂಡ, ನೀವು ನನಗೆ ತೋರಿದ ಪ್ರೀತಿ, ಕಾಳಜಿ, ವಾತ್ಸಲ್ಯಕ್ಕೆ ನಾನು ಆಭಾರಿಯಾಗಿದ್ದೇನೆ. ನಿಮ್ಮನ್ನು ನನ್ನ ಪತಿಯಾಗಿ ಹೊಂದಲು ನಿಜವಾಗಿಯೂ ಪುಣ್ಯ ಮಾಡಿದ್ದೇನೆ ಎಂದು ತೇಜಸ್ವಿನಿ ಬರೆದುಕೊಂಡಿದ್ದರು.