ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಸೇವಿಸಿದರೆ ಒಳ್ಳೆಯದೇ ಎಂದು ಪ್ರಶ್ನಿಸಿದರೆ, ಖಂಡಿತವಾಗಿಯೂ ಹೌದು. ಹಸಿ ಬೆಳ್ಳುಳ್ಳಿಯನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಅದರಿಂದ ಹಲವಾರು ರೀತಿಯ ಲಾಭಗಳು ಆರೋಗ್ಯ ಮತ್ತು ಸಾಮಾನ್ಯ ಜೀವನದ ಮೇಲೆ ಆಗುವುದು. ಆ ಲಾಭಗಳು ಯಾವುದು ಎಂದು ತಿಳಿಯುವ..
ತೂಕ ಇಳಿಸಲು ನೆರವಾಗುವುದು
ದೇಹದಲ್ಲಿ ಬೊಜ್ಜು ಆವರಿಸಿಕೊಂಡು, ಅನಾರೋಗ್ಯಕಾರಿ ಆಗಿ ತೂಕ ಬೆಳೆದಿದ್ದರೆ ಆಗ ಅದನ್ನು ಇಳಿಸಲು ಹಸಿ ಬೆಳ್ಳುಳ್ಳಿ ಸೇವಿಸಿ. ಹಸಿ ಬೆಳ್ಳಿಯಲ್ಲಿ ಕೆಟ್ಟ ಮತ್ತು ಅಧಿಕ ಕೊಬ್ಬನ್ನು ಕರಗಿಸುವಂತಹ ಅಂಶಗಳು ಇವೆ. ವಿವಿಧ ರೀತಿಯ ಅಧ್ಯಯನಗಳ ಪ್ರಕಾರ ಬೆಳ್ಳುಳ್ಳಿಯು ಚಯಾಪಚಯ ಕ್ರಿಯೆ ವೃದ್ಧಿಸುವುದು ಎಂದು ಕಂಡುಕೊಳ್ಳಲಾಗಿದೆ.
ರಕ್ತದಲ್ಲಿ ಸಕ್ಕರೆ ಮಟ್ಟ ಕಾಪಾಡಲು
ಮಧುಮೇಹಿಗಳಿಗೆ ಬೆಳ್ಳುಳ್ಳಿಯು ತುಂಬಾ ಪ್ರಯೋಜನಕಾರಿ. ಇದರಲ್ಲಿ ಇರುವಂತಹ ಅಲಿಸಿನ್ ಎನ್ನುವ ಅಂಶವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವುದು ಮತ್ತು ತಗ್ಗಿಸುವುದು. ಬೆಳ್ಳುಳ್ಳಿಯನ್ನು ಜಜ್ಜಿಕೊಂಡಾಗ ಅಥವಾ ಕತ್ತರಿಸಿದಾಗ ಅಲಿಸಿನ್ ಹೆಚ್ಚಾಗುವುದು. ಜಜ್ಜಿಕೊಂಡ ಬೆಳ್ಳುಳ್ಳಿಯನ್ನು ದಿನದಲ್ಲಿ ಎರಡು ಸಲ ಸೇವಿಸಿದರೆ, ಆಗ ಸಕ್ಕರೆ ಮಟ್ಟವು ನಿಯಂತ್ರಣದಲ್ಲಿ ಇರುವುದು.
ಖಿನ್ನತೆ ನಿವಾರಿಸುವುದು
ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಬೆಳ್ಳುಳ್ಳಿ ತುಂಬಾ ಒಳ್ಳೆಯದು. ಖಾಲಿ ಹೊಟ್ಟೆಯಲ್ಲಿ ಹಸಿ ಬೆಳ್ಳುಳ್ಳಿ ಸೇವಿಸಿದರೆ ಆಗ ಅದು ನೈಸರ್ಗಿಕವಾಗಿ ಮನಸ್ಥಿತಿ ಸುಧಾರಣೆ ಮಾಡುವುದು. ದೇಹದಲ್ಲಿನ ರಾಸಾಯನಿಕಗಳನ್ನು ಇದು ಸಮತೋಲನದಲ್ಲಿ ಇಡುವುದು ಮತ್ತು ಮೆದುಳಿನ ರಾಸಾಯನಿಕಗಳನ್ನು ಕೂಡ. ಖಿನ್ನತೆಯು ಮೆದುಳಿನ ರಾಸಾಯನಿಕದ ಅಸಮತೋಲನದಿಂದ ಬರುವುದು ಮತ್ತು ಬೆಳ್ಳುಳ್ಳಿಯು ಖಿನ್ನತೆ ವಿರುದ್ಧ ಹೋರಾಡಲು ನೆರವಾಗವುದು.
ಕ್ಯಾನ್ಸರ್ ತಡೆಯುವುದು
ಬೆಳ್ಳುಳ್ಳಿಯಲ್ಲಿ ಉರಿಯೂತ ಶಮನಕಾರಿ, ರೋಗನಿರೋಧಕ ಮತ್ತು ಕ್ಯಾನ್ಸರ್ ವಿರೋಧಿ ಅಂಶಗಳು ಇವೆ. ಖಾಲಿ ಹೊಟ್ಟೆಯಲ್ಲಿ ನೀವು ಬೆಳ್ಳುಳ್ಳಿ ಸೇವಿಸಿದರೆ ಅದರಿಂದ ಕೆಲವೊಂದು ರೀತಿಯ ಕ್ಯಾನ್ಸರ್ ನ್ನು ತಡೆಯಬಹುದು. ಬೆಳ್ಳುಳ್ಳಿಯಲ್ಲಿ ಉನ್ನತ ಮಟ್ಟದ ಆ್ಯಂಟಿಆಕ್ಸಿಡೆಂಟ್ ಗಳು ಇವೆ ಮತ್ತು ಇದು ದೇಹವನ್ನು ನಿರ್ವಿಷಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುವುದು.
ಸೋಂಕಿನ ವಿರುದ್ಧ ಹೋರಾಡುವುದು
ಬೆಳ್ಳುಳ್ಳಿಯಲ್ಲಿ ರೋಗನಿರೋಧಕ ಗುಣವಿರುವುದಾಗಿ ಈಗಾಗಲೇ ನಮಗೆ ತಿಳಿದಿದೆ. ಆದರೆ ಔಷಧಿಗೆ ಪರ್ಯಾಯವಾಗಿ ಇದನ್ನು ಬಳಸಬಾರದು. ಪ್ರತಿನಿತ್ಯ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸಿದರೆ ಆಗ ಔಷಧಿ ಸೇವನೆ ಪ್ರಮಾಣ ಕಡಿಮೆ ಮಾಡಬಹುದು. ನಿಯಮಿತವಾಗಿ ಬೆಳ್ಳುಳ್ಳಿ ಸೇವಿಸಿದರೆ ದೀರ್ಘಕಾಲದ ತನಕ ಸೋಂಕನ್ನು ದೂರವಿಡಬಹುದು.
ಅಧಿಕ ರಕ್ತದೊತ್ತಡ ತಗ್ಗಿಸಲು
ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಸೇವಿಸಿದರೆ ಅದರಿಂದ ಅಧಿಕ ರಕ್ತದೊತ್ತಡದ ಸಮಸ್ಯೆಯನ್ನು ಕಡಿಮೆ ಮಾಡ ಬಹುದು. ಅಧಿಕ ರಕ್ತದೊತ್ತಡದ ಸಮಸ್ಯೆಯ ಅಪಾಯವಿರುವಂತಹ ಜನರಿಗೆ ವೈದ್ಯರು ಕೂಡ ಬೆಳ್ಳುಳ್ಳಿ ಸೇವನೆ ಮಾಡಲು ಸೂಚಿಸುವರು.
ರಕ್ತ ಶುದ್ಧೀಕರಿಸುವುದು
ಬೆಳಗ್ಗೆ ಎದ್ದ ಬಳಿಕ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಸೇವಿಸಿದರೆ ಅದು ರಕ್ತಕ್ಕೆ ತುಂಬಾ ಒಳ್ಳೆಯದು. ಬೆಳ್ಳುಳ್ಳಿಯಲ್ಲಿ ಇರುವ ನಿರ್ವಿಷಗೊಳಿಸುವ ಅಂಶವು ರಕ್ತನಾಳದಲ್ಲಿ ಇರುವಂತಹ ಕಲ್ಮಶವನ್ನು ತೆಗೆಯುವುದು ಮತ್ತು ರಕ್ತನಾಳದ ಆರೋಗ್ಯವನ್ನು ಸುಧಾರಿಸುವುದು. ಆ್ಯಂಟಿ ಆಕ್ಸಿಡೆಂಟ್, ರೋಗನಿರೋಧಕ ಮತ್ತು ಉರಿಯೂತ ಶಮನಕಾರಿ ಗುಣ ಹೊಂದಿರುವಂತಹ ಬೆಳ್ಳುಳ್ಳಿಯು ರಕ್ತ ಶುದ್ಧೀಕರಿಸಲು ಪ್ರಮುಖ ಪಾತ್ರ ವಹಿಸುವುದು.
ಜೀರ್ಣಕ್ರಿಯೆಗೆ ನೆರವಾಗುವುದು
ಬೆಳ್ಳುಳ್ಳಿಯಲ್ಲಿ ಆ್ಯಂಟಿಆಕ್ಸಿಡೆಂಟ್, ಪ್ರಿಬಯೋಟಿಕ್ ಮತ್ತು ಪ್ರೋಬಯೋಟಿಕ್ ಅಂಶವು ಸಮೃದ್ಧವಾಗಿದೆ. ಈ ಅಂಶಗಳು ಹೊಟ್ಟೆಯ ಆರೋಗ್ಯವನ್ನು ವೃದ್ಧಿಸಲು ನೆರವಾಗುವುದು. ಬೆಳ್ಳುಳ್ಳಿಯಲ್ಲಿ ಇರುವಂತಹ ಕೆಲವೊಂದು ಖನಿಜಾಂಶಗಳು ಮತ್ತು ವಿಟಮಿನ್ ಗಳು ಯಕೃತ್, ಮೂತ್ರನಳ ಮತ್ತು ಕಿಡ್ನಿ ಆರೋಗ್ಯವನ್ನು ಸುಧಾರಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುವುದು. ಇದರೊಂದಿಗೆ ಬೆಳ್ಳುಳ್ಳಿಯಲ್ಲಿ ಇರುವಂತಹ ಒತ್ತಡ ವಿರೋಧಿ ಅಂಶಗಳು ಹೊಟ್ಟೆಯಲ್ಲಿ ಹೆಚ್ಚು ಆಮ್ಲವು ಬಿಡುಗಡೆ ಆಗುವುದನ್ನು ತಡೆಯುವುದು ಮತ್ತು ಜೀರ್ಣಕ್ರಿಯೆ ವ್ಯವಸ್ಥೆಯು ಹೆಚ್ಚು ಪರಿಣಾಮಕಾರಿ ಆಗಿರುವಂತೆ ಮಾಡುವುದು.
ಶ್ವಾಸಕೋಶದ ಆರೋಗ್ಯ ಸುಧಾರಿಸುವುದು
ಬೆಳ್ಳುಳ್ಳಿಯು ಶ್ವಾಸಕೋಶವನ್ನು ಶುದ್ಧವಾಗಿಡುವುದು. ನಿಯಮಿತವಾಗಿ ಬೆಳ್ಳುಳ್ಳಿ ಸೇವಿಸಿದರೆ ಅದರಿಂದ ಅಸ್ತಮಾ, ಬ್ರಾಂಕೈಟಿಸ್, ಕೆಮ್ಮು ಮತ್ತು ಕ್ಷಯ ರೋಗವನ್ನು ತಡೆಯಬಹುದು. ಶ್ವಾಸಕೋಶದ ದಟ್ಟಣೆ ಕಡಿಮೆ ಮಾಡುವುದು ಮತ್ತು ದೇಹದಲ್ಲಿ ಆಮ್ಲಜನಕದ ಮಟ್ಟವನ್ನು ಇದು ಸುಧಾರಿಸುವುದು. ಬೆಳ್ಳುಳ್ಳಿಯಲ್ಲಿ ರೋಗನಿರೋಧಕ ಮತ್ತು ಉರಿಯೂತ ಶಮನಕಾರಿ ಗುಣಗಳು ಇವೆ. ಇದು ಸಾಮಾನ್ಯ ಶೀತಕ್ಕೂ ಒಳ್ಳೆಯ ಆಹಾರವಾಗಿದೆ.
ರಕ್ತದೊತ್ತಡ ನಿಯಂತ್ರಿಸುವುದು
ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಸೇವಿಸಿದರೆ ಕೊಲೆಸ್ಟ್ರಾಲ್ ಮತ್ತು ರಕ್ತದೊತ್ತಡವನ್ನು ನಿಯಂತ್ರಿಸಲು ಇದು ತುಂಬಾ ಪರಿಣಾಮಕಾರಿ ಆಗಿರುವುದು. ಬೆಳ್ಳುಳ್ಳಿಯಲ್ಲಿ ಪ್ರತಿರೋಧಕ ಶಕ್ತಿ ಸುಧಾರಿಸುವ ಮತ್ತು ರಕ್ತ ಶುದ್ಧೀಕರಿಸುವ ಅಂಶಗಳು ಇವೆ. ದೇಹದಲ್ಲಿ ಕೊಲೆಸ್ಟ್ರಾಲ್ ಹೀರಿಕೊಳ್ಳಲು ಬೆಳ್ಳುಳ್ಳಿಯಲ್ಲಿ ಇರುವ ಅಂಶವು ನೆರವಾಗುವುದು. ಇದರಿಂದಾಗಿ ಆರೋಗ್ಯಕರ ರಕ್ತದೊತ್ತಡವನ್ನು ಕಾಪಾಡಬಹುದು.