ಐಜ್ವಾಲ್: ಮಣಿಪುರದಲ್ಲಿ (Manipur) ನಡೆಯುತ್ತಿರುವ ಹಿಂಸಾಚಾರಕ್ಕಿಂತ ಇಸ್ರೇಲ್-ಹಮಾಸ್ ಯುದ್ಧದಲ್ಲಿ (Israel-Hamas War) ಪ್ರಧಾನಿ ಹೆಚ್ಚು ಆಸಕ್ತಿ ಹೊಂದಿದ್ದಾರೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ವಾಗ್ದಾಳಿ ನಡೆಸಿದರು.
ಚುನಾವಣಾ ಕಣದಲ್ಲಿರುವ ಮಿಜೋರಾಂನಲ್ಲಿ ಮಾತನಾಡಿದ ರಾಹುಲ್, ಪ್ರಧಾನಿ ಮತ್ತು ಭಾರತ ಸರ್ಕಾರ ಇಸ್ರೇಲ್ನಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ತುಂಬಾ ಆಸಕ್ತಿ ಹೊಂದಿದ್ದಾರೆ. ಆದರೆ ಮಣಿಪುರದಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಆಸಕ್ತಿ ಇಲ್ಲ ಎಂಬುದು ನನಗೆ ಆಶ್ಚರ್ಯ ತಂದಿದೆ ಎಂದು ಹೇಳಿದರು.
ಮೇ ತಿಂಗಳಲ್ಲಿ 2 ಸಮುದಾಯಗಳ ನಡುವೆ ಹಿಂಸಾಚಾರ ಪ್ರಾರಂಭವಾದಾಗಿನಿಂದ ಪ್ರಧಾನಿ ಮೋದಿ ಇನ್ನೂ ಮಣಿಪುರಕ್ಕೆ ಭೇಟಿ ನೀಡದಿರುವುದು ನಾಚಿಕೆಗೇಡಿನ ಸಂಗತಿ. ಮಣಿಪುರದ ಹಿಂಸಾಚಾರವು ಭಾರತದ ಕಲ್ಪನೆಯ ಮೇಲಿನ ಆಕ್ರಮಣ ಮತ್ತು ದೇಶದ ಜನರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಭಾರತ್ ಜೋಡೊ ಮೂಲಕ ನಾವು ದೇಶವನ್ನು ಒಂದುಗೂಡಿಸುತ್ತಿದ್ದೇವೆ ಎಂದರು.