ಚೆನ್ನೈ: ಇಂಗ್ಲೆಂಡ್ಗೆ (England) ಶಾಕ್ ನೀಡಿದ್ದ ಅಫ್ಘಾನಿಸ್ತಾನ ಈಗ ಬದ್ಧ ವೈರಿ ಪಾಕಿಸ್ತಾನಕ್ಕೂ (Pakistan) ಶಾಕ್ ನೀಡಿದೆ. ಇದೇ ಮೊದಲ ಬಾರಿಗೆ ವಿಶ್ವಕಪ್ ಕ್ರಿಕೆಟ್ನಲ್ಲಿ (World Cup Cricket) ಅಫ್ಘಾನಿಸ್ತಾನ (Afghanistan) ಪಾಕಿಸ್ತಾನದ ವಿರುದ್ಧ ಜಯಗಳಿಸಿ ಇತಿಹಾಸ ಸೃಷ್ಟಿಸಿದೆ.
ಪಾಕಿಸ್ತಾನ ಕಳಪೆ ಬೌಲಿಂಗ್ ಮತ್ತು ಕಳಪೆ ಫೀಲ್ಡಿಂಗ್ ಲಾಭ ಪಡೆದ ಅಫ್ಘಾನಿಸ್ತಾನ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಗೆಲ್ಲಲು 282 ರನ್ಗಳ ಗುರಿಯನ್ನು ಪಡೆದ ಅಫ್ಘಾನಿಸ್ತಾನ ಇನ್ನೂ 6 ಎಸೆತ ಇರುವಂತೆಯೇ 2 ವಿಕೆಟ್ ನಷ್ಟಕ್ಕೆ 286 ರನ್ ಹೊಡೆಯುವ ಮೂಲಕ ಜಯ ಸಾಧಿಸಿತು.
ಬ್ಯಾಟಿಂಗ್ ಆರಂಭಿಸಿದ ಅಫ್ಘಾನಿಸ್ತಾನ ರೆಹಮಾನುಲ್ಲಾ ಗುರ್ಬಾಜ್ ಮತ್ತು ಇಬ್ರಾಹಿಂ ಜಾರ್ದನ್ ಮೊದಲ ವಿಕೆಟಿಗೆ 128 ಎಸೆತಗಳಲ್ಲಿ 130 ರನ್ ಜೊತೆಯಾಟವಾಡುವ ಮೂಲಕ ಪಂದ್ಯವನ್ನು ಪಾಕ್ ಕೈಯಿಂದ ಕಸಿದರು.
ನಂತರ ಎರಡನೇ ವಿಕೆಟಿಗೆ ರೆಹ್ಮಾತ್ ಶಾ ಮತ್ತು ಜದ್ರಾನ್ 74 ಎಸೆತಗಳಲ್ಲಿ 60 ರನ್ ಜೊತೆಯಾಟ, ಮುರಿಯದ ಮೂರನೇ ವಿಕೆಟಿಗೆ ರೆಹ್ಮತ್ ಶಾ ಮತ್ತು ಹಶ್ಮತುಲ್ಲಾ ಶಾಹಿದಿ 93 ಎಸೆತಗಳಲ್ಲಿ 96 ರನ್ ಜೊತೆಯಾಟವಾಡಿ ತಂಡವನ್ನು ಗೆಲ್ಲಿಸಿಕೊಟ್ಟರು