ರಾಜಸ್ಥಾನ : 5 ಗ್ಯಾರೆಂಟಿಗಳನ್ನು ಪಂಚರಾಜ್ಯ ಚುನಾವಣೆಗಳಲ್ಲಿ ಗೆಲುವಿನ ಅಸ್ತ್ರ ವಾಗಿ ಬಳಸಿಕೊಂಡ ಕಾಂಗ್ರೆಸ್. ಇದೀಗ ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣಾ ಗೆಲುವಿಗಾಗಿ ಕಾಂಗ್ರೆಸ್ ಗ್ಯಾರಂಟಿಗಳನ್ನು ಘೋಷಿಸಿದೆ. ಅದರಂತೆ ರಾಜಸ್ಥಾನ ಮತದಾರರಿಗೆ 500 ರೂಪಾಯಿಗೆ ತಿಂಗಳ ಅಡುಗೆ ಅನಿಲ ಸಿಲಿಂಡರ್ ಪ್ರತಿ ಮನೆಯ ಯಜಮಾನಿಗೆ ವಾರ್ಷಿಕ 10 ಸಾವಿರ ರೂಪಾಯಿ ಸಹಾಯಧನ ನೀಡುವುದಾಗಿ ಗ್ಯಾರಂಟಿ ಘೋಷಿಸಿದ ಪ್ರಿಯಾಂಕಾ ಗಾಂಧಿ.
ರಾಜಸ್ಥಾನದಲ್ಲೂ ಗೃಹಲಕ್ಷ್ಮಿ ಯೋಜನೆ ಜಾರಿ :
ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿಗೆ ತಂದಿದ್ದು, ಅದೇ ರೀತಿಯ ಯೋಜನೆಯನ್ನು ರಾಜಸ್ಥಾನದಲ್ಲಿಯೂ ಜಾರಿಗೆ ತರೋದಾಗಿ ಕಾಂಗ್ರೆಸ್ ಘೋಷಿಸಿದೆ. ಆ ಯೋಜನೆಗೆ ಗೃಹಲಕ್ಷ್ಮಿ ಖಾತರಿ ಯೋಜನೆ ಅಂತ ಕಾಂಗ್ರೆಸ್ ಹೆಸರು ನೀಡಿದೆ.
ಮನೆ ಯಜಮಾನಿಗೆ ವಾರ್ಷಿಕ 10 ಸಾವಿರ ರೂಪಾಯಿ :
ಗೃಹಲಕ್ಷ್ಮಿ ಖಾತರಿ ಯೋಜನೆಯ ಅಡಿಯಲ್ಲಿ ರಾಜಸ್ಥಾನದಲ್ಲಿ ಮಹಿಳೆಯರಿಗೆ ವಾರ್ಷಿಕವಾಗಿ 10 ಸಾವಿರ ಹಣ ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ. ಅದರಂತೆ ಪ್ರತಿ ಮನೆಯ ಓರ್ವ ಯಜಮಾನಿಗೆ ವರ್ಷಕ್ಕೆ 10 ಸಾವಿರ ರೂಪಾಯಿ ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ.
500 ರೂಪಾಯಿಗೆ ಪ್ರತಿ ಮನೆಗೆ ಸಿಲಿಂಡರ್ :
ಇನ್ನು ರಾಜಸ್ಥಾನದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 500 ರೂಪಾಯಿಗೆ ಗ್ಯಾಸ್ ಸಿಲಿಂಡರ್ ನೀಡುವುದಾಗಿ ತಿಳಿಸಿದೆ. 1.05 ಕೋಟಿ ಕುಟುಂಬಗಳಿಗೆ ಈ ಯೋಜನೆ ನೀಡುವುದಾಗಿ ಭರವಸೆ ನೀಡಲಾಗಿದೆ.
ನವೆಂಬರ್ 25ಕ್ಕೆ ರಾಜಸ್ಥಾನ ವಿಧಾನಸಭಾ ಚುನಾವಣೆ :
ನವೆಂಬರ್ 25 ರಂದು ನಿಗದಿಯಾಗಿರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜಸ್ಥಾನದ ಜುಂಜುನುದಲ್ಲಿ ನಡೆದ ಕಾಂಗ್ರೆಸ್ ರ್ಯಾಲಿಯಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಭಾಗವಹಿಸಿದ್ದರು. 200 ಸದಸ್ಯ ಬಲದ ಸದನದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.