ಬೆಂಗಳೂರು;- ತಂತ್ರಜ್ಞಾನ ಕ್ಷೇತ್ರದಲ್ಲಿ ದೇಶದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ
ನಗರದಲ್ಲಿ ಗುರುವಾರ ನಡೆದ ಬೆಂಗಳೂರಿನಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನ ಸುವರ್ಣ ಮಹೋತ್ಸವದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗವಹಿಸಿ ಮಾತನಾಡಿದರು.
ಕರ್ನಾಟಕವು ಶಿಕ್ಷಣ, ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ದೇಶದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ. ಬೆಂಗಳೂರು ಭಾರತದ ಶಿಕ್ಷಣ ಮತ್ತು ಐಟಿ ಹಬ್ ಎಂದು ಕರೆಯಲ್ಪಡುತ್ತದೆ. ಇಲ್ಲಿ ಅನೇಕ ವಿಶ್ವ ದರ್ಜೆಯ ಸಂಶೋಧನಾ ಕೇಂದ್ರಗಳು ಮತ್ತು ಶಿಕ್ಷಣ ಸಂಸ್ಥೆಗಳಿವೆ, ಅವುಗಳಲ್ಲಿ ಒಂದು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅದು ತನ್ನ ಧ್ಯೇಯ ವಾಕ್ಯದಂತೆ ಕೆಲಸ ಮಾಡಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು
ಐಐಎಂ ತನ್ನ ಧ್ಯೇಯವಾಕ್ಯ ‘ತೇಜಸ್ವಿ ನವಧಿತಂಸ್ತು’- ‘ನಮ್ಮ ಅಧ್ಯಯನಗಳನ್ನು ಪ್ರಬುದ್ಧಗೊಳಿಸು’ ಎನ್ನುವಂತೆ ಸರ್ಕಾರ ಮತ್ತು ಸಮಾಜಕ್ಕೆ ನಿರ್ವಹಣೆ, ನಾವೀನ್ಯತೆ ಮತ್ತು ಉದ್ಯಮಶೀಲತೆಯಲ್ಲಿ ಶ್ರೇಷ್ಠತೆಯನ್ನು ಉತ್ತೇಜಿಸುವ ಮೂಲಕ ಸಂಸ್ಥೆಗಳನ್ನು ವಿಶ್ವಪ್ರಸಿದ್ಧಗೊಳಿಸಿದೆ. ಆದ್ದರಿಂದ ಸುವರ್ಣ ಮಹೋತ್ಸವ ಪ್ರತಿಷ್ಠಾಪನಾ ಸಪ್ತಾಹದ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಸಂತಸ ತಂದಿದೆ ಎಂದರು.