ಸಾಮಾನ್ಯವಾಗಿ ನಾವು ಹೋಟೆಲ್ಗಳಿಗೆ ಊಟ ಮಾಡಲು ಹೋದಾಗ, ಪ್ರತೀ ಟೇಬಲ್ ಮೇಲೆಯೂ ಒಂದು ಬಟ್ಟಲಿನಲ್ಲಿ ಸೋಂಪು ಕಾಳನ್ನು ಇಟ್ಟಿರುವುದನ್ನು ನೋಡಿದ್ದೇವೆ. ಜನರು ಊಟವಾದ ಬಳಿಕ ನಾಲ್ಕು ಕಾಳು ಸೋಂಪನ್ನು ಎತ್ತಿ ಬಾಯಿಗೆ ಹಾಕಿಕೊಳ್ಳುತ್ತಾರೆ. ಈ ಕಾಳುಗಳು ಮೌತ್ ಫ್ರೆಶ್ನರ್ ಆಗಿ ಕಾರ್ಯನಿರ್ವಹಿಸುತ್ತವೆ ಎಂದು ಹೇಳಿದರೆ ತಪ್ಪಾಗಲಾರದು.
ಇದು ಅನೇಕ ಪೋಷಕಾಂಶಗಳನ್ನು ಹೊಂದಿದ್ದು, ಇದರಲ್ಲಿ ಕ್ಯಾಲ್ಸಿಯಂ ಮತ್ತು ಕಬ್ಬಿಣದಂತಹ ಪೋಷಕಾಂಶಗಳಿವೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೋಂಪು ಸೇವನೆಯಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.
ಮಲಬದ್ಧತೆ: ಸೋಂಪಿನಲ್ಲಿ ನಾರಿನಂಶ ಅಧಿಕವಾಗಿದೆ. ಮುಂಜಾನೆ ಇದನ್ನು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆಯು ಸುಧಾರಿಸುತ್ತದೆ. ಇದು ಅನೇಕ ಜೀರ್ಣಕಾರಿ ಸಮಸ್ಯೆಗಳನ್ನು ತೊಡೆದುಹಾಕಲು ಸಹ ಸಹಾಯ ಮಾಡುತ್ತದೆ. ಇದು ಮಲಬದ್ಧತೆ ಸಮಸ್ಯೆಯಿಂದ ಮುಕ್ತಿ ಹೊಂದಲು ಕೆಲಸ ಮಾಡುತ್ತದೆ.
ರೋಗನಿರೋಧಕ ಶಕ್ತಿ: ಸೋಂಪು ವಿಟಮಿನ್ ಸಿ ಅಂಶವನ್ನು ಹೊಂದಿದೆ. ಇದನ್ನು ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೋಂಪು ಸೇವಿಸುವುದರಿಂದ ನಿಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.
ಮೂಳೆ: ಸೋಂಪು ಕ್ಯಾಲ್ಸಿಯಂನ್ನು ಹೊಂದಿದ್ದು, ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸುವುದರಿಂದ ಮೂಳೆಗಳು ಗಟ್ಟಿಯಾಗುತ್ತವೆ. ಇದು ಆಸ್ಟಿಯೊಪೊರೋಸಿಸ್ನಂತಹ ರೋಗಗಳನ್ನು ತಡೆಯುತ್ತದೆ.
ರಕ್ತಹೀನತೆ: ಸೋಂಪು ಕಬ್ಬಿಣ ಅಂಶದಿಂದ ಸಮೃದ್ಧವಾಗಿದೆ. ಇದನ್ನು ಸೇವಿಸುವುದರಿಂದ ದೇಹದಲ್ಲಿ ರಕ್ತದ ಕೊರತೆ ಉಂಟಾಗುವುದಿಲ್ಲ. ಇದು ರಕ್ತಹೀನತೆಯ ಸಮಸ್ಯೆಯಿಂದ ನಿಮ್ಮನ್ನು ರಕ್ಷಿಸಲು ಸಹಾಯ ಮಾಡುತ್ತದೆ.