ಕೆ.ಆರ್.ಪುರ;– ಚಂದ್ರನ್ ಪಾಲಿಕೆ ಎಆರ್ ಓ ಮನೆ ಮೇಲೆ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರೇಡ್ ಮಾಡಿದ್ದಾರೆ.
ಚಂದ್ರನ್ ಗೆ ಸೇರಿದ ಮೂರು ಸ್ಥಳಗಳ ಮೇಲೆ ರೇಡ್ ನಡೆಸಲಾಗಿದ್ದು, ಇಬ್ಬರು ಎಸ್ಪಿಗಳ ನೇತೃತ್ವದಲ್ಲಿ ದಾಳಿ ನಡೆದಿದೆ. ವಂಶಿ ಕೃಷ್ಣ ಶ್ರೀನಾಥ್ ಜೋಶಿ ನೇತೃತ್ವದಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ.
ಇನ್ನೂ ಆರ್ ಟಿಓ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ದಾಳಿ ವೇಳೆ ಹಲವು ದಾಖಲೆ ಪರಿಶೀಲನೆ ಮಾಡಿದ್ದಾರೆ. ಅಧಿಕಾರಿ ಮನೆ, ಕಚೇರಿ ಸೇರಿದಂತೆ ಮೂರು ಕಡೆಗಳಲ್ಲಿ ದಾಳಿ ನಡೆದಿದೆ. ಮೂರು ಕಡೆಗಳಲ್ಲೂ ಪರಿಶೀಲನೆ ಮುಂದುವರಿದಿದೆ.