ಬೆಂಗಳೂರು;- ನವೆಂಬರ್ 5ರವರೆಗೆ ಕರ್ನಾಟಕದ ಕರಾವಳಿ, ಉತ್ತರ, ದಕ್ಷಿಣ ಒಳನಾಡಿನಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ,ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಈ ಬಾರಿ ಮುಂಗಾರಿನಲ್ಲಿ ಮಳೆ ತುಂಬಾ ಕಡಿಮೆಯಾಗಿದೆ, ಹಲವು ಜಿಲ್ಲೆಗಳು ಬರದಿಂದ ಕಂಗೆಟ್ಟಿವೆ, ಹಿಂಗಾರು ಮಳೆಯಾದರೂ ಉತ್ತಮವಾಗಿ ಬಂದಲ್ಲಿ, ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕೊಂಚ ಕಡಿಮೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ