ಬೆಂಗಳೂರು: ಎರಡೂವರೆ ವರ್ಷದ ಬಳಿಕ ಪವರ್ ಶೇರಿಂಗ್ ಆಗುವ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಈ ವಿಚಾರದಲ್ಲಿ ನಾನು ಸಿದ್ದರಾಮಯ್ಯ ಪರ ಎಂದು ಸಚಿವ ಜಮೀರ್ ಅಹ್ಮದ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಈ ವೇಳೆ ಎರಡೂವರೆ ವರ್ಷದ ಬಳಿಕ ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂಬ ಶಾಸಕರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಪವರ್ ಶೇರಿಂಗ್ ಬಗ್ಗೆ ಯಾವುದೇ ಚರ್ಚೆ ಅಗಿಲ್ಲ. ಇದು ಮಾಧ್ಯಮಗಳ ಸೃಷ್ಟಿ, ಬಿಜೆಪಿಗರು (BJP) ಏನೇ ತಿಪ್ಪರಲಾಗ ಹಾಕಿದರೂ ಏನು ಮಾಡಲು ಸಾಧ್ಯವಿಲ್ಲ. ನಾವೆಲ್ಲ ಒಗ್ಗಟ್ಟಾಗಿ, ಒಂದಾಗಿ ಇದ್ದೇವೆ ಎಂದಿದ್ದಾರೆ
ನಾನು ಯಾವತ್ತೂ ಸಿದ್ದರಾಮಯ್ಯ ಪರವಾಗಿ ಇರುತ್ತೇನೆ. ಇವತ್ತು ನಾನು ಸಿದ್ದರಾಮಯ್ಯ ಪರನೇ ಇದ್ದೇನೆ. ನಾನು ತೀರ್ಮಾನ ತೆಗೆದುಕೊಳ್ಳಲು ಆಗುತ್ತದೆಯೇ? ನಮ್ಮ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರು ಏನು ನಿರ್ಧಾರ ಮಾಡುತ್ತಾರೋ ಅದಕ್ಕೆ ನಾವು ಬದ್ಧ ಎಂದು ಹೇಳಿದ್ದಾರೆ.
ಸಚಿವ ಪರಮೇಶ್ವರ್ ಮನೆಯಲ್ಲಿ ಸಿಎಂ ಸಭೆ ವಿಚಾರಕ್ಕೆ, ಡಿನ್ನರ್ ಮೀಟಿಂಗ್ ಮಾಡೋದು ತಪ್ಪಾ?ಮಾಧ್ಯಮದವರು ಏನೇನೋ ಸೃಷ್ಟಿ ಮಾಡಿಕೊಳ್ಳುತ್ತಿದ್ದಾರೆ. ನನ್ನ ಮನೆಯಲ್ಲೂ ಡಿನ್ನರ್ ಕರೆಯುತ್ತೇನೆ. ಸತೀಶ್ ಜಾರಕಿಹೊಳಿ ನನ್ನನ್ನು ಕರೆದಿದ್ದರು. ನಾನು ಊರಲ್ಲಿ ಇರಲಿಲ್ಲ ಅದಕ್ಕೆ ಹೋಗಿರಲಿಲ್ಲ. ಊಟಕ್ಕೆ ಸೇರೋದು ತಪ್ಪಾ? ಎಂದು ಅವರು ಪ್ರಶ್ನಿಸಿದ್ದಾರೆ.