ಬೆಂಗಳೂರು: ಭಾರತೀಯ ಜನತಾ ಪಕ್ಷದ ವಿಚಾರವಾಗಿ ಹೆಚ್ಚು ತಲೆಕೆಡಿಸಿಕೊಳ್ಳಲ್ಲ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿಯ ಪ್ರತಿಯೊಬ್ಬ ನಾಯಕರೂ ನಮ್ಮ ಬಗ್ಗೆ ಮಾತನಾಡುತ್ತಾರೆ. ಬಿಜೆಪಿಯವರಿಗೆ ನಮ್ಮ ಪಕ್ಷದ ಮೇಲೆ ಹೆಚ್ಚು ಆಸಕ್ತಿ ಇದ್ದಂತೆ ಕಾಣ್ತಿದೆ. ಅವರೆಲ್ಲರೂ ನಮ್ಮ ಪಕ್ಷಕ್ಕೆ ಬರ್ತಾರೇನೋ ಈ ಬಗ್ಗೆ ನಾನು ಏನು ಹೇಳಲ್ಲ ಆದರೆ ಯಾರೇ ನಮ್ಮ ಪಕ್ಷಕ್ಕೆ ಬಂದರೆ ಸ್ವಾಗತ ಎಂದರು.
ಹಾಗೆ ಅದಕ್ಕಾಗಿ ನಮ್ಮ ಪಕ್ಷದ ಬಗ್ಗೆ ಹೆಚ್ಚು ಚರ್ಚೆ ನಡೆಸುತ್ತಿದ್ದಾರೇನೋ? ಎಂದು ಬಿಜೆಪಿ ವಿರುದ್ಧ ಸಚಿವ ಡಾ.ಜಿ.ಪರಮೇಶ್ವರ್ ಕಿಡಿಕಾರಿದರು.