ಬೆಂಗಳೂರು;– ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು, 3 ಜಿಲ್ಲೆಗಳಿಗೆ ಭಾರತೀಯ ಹವಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿಯಲ್ಲಿ, ದಕ್ಷಿಣ ಒಳನಾಡಿನ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರಿನಲ್ಲಿ ನವೆಂಬರ್ 7ರವರೆಗೆ ಮಳೆಯಾಗಲಿದೆ.
ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ, ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.