ಪಾಕಿಸ್ತಾನದ ಖ್ಯಾತ ಇಸ್ಲಾಮಿಕ್ ವಿದ್ವಾಂಸ ಮೌಲಾನಾ ತಾರಿಕ್ ಜಮೀಲ್(Maulana Tariq Jamil) ಅವರ ಪುತ್ರ ಆಸಿಮ್ ಜಮೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮೌಲಾನಾ ಮಾಹಿತಿ ನೀಡಿದ್ದಾರೆ, ತನ್ನ ಮಗ ಆಸೀಮ್ ಜಮೀಲ್ ತಲಂಬಾದಲ್ಲಿ ಮೃತಪಟ್ಟಿದ್ದಾನೆ. ಈ ಹಠಾತ್ ಸಾವಿನ ಶಾಕ್ನಿಂದ ನಮಗೆ ಹೊರಬರಲಾಗುತ್ತಿಲ್ಲ ಎಂದು ಬರೆದುಕೊಂಡಿದ್ದಾರೆ.
ತಲಂಬಾದಲ್ಲಿರುವ ತಮ್ಮ ತೋಟದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಎದೆಗೆ ಗುಂಡು ತಗುಲಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಪೊಲೀಸರು ಮತ್ತು ಫೋರೆನ್ಸಿಕ್ ತಂಡವು ಪ್ರಕರಣದ ತನಿಖೆ ನಡೆಸುತ್ತಿದ್ದು, ಸಾವಿನ ಕಾರಣದ ಬಗ್ಗೆ ಇನ್ನೂ ಏನೂ ಸ್ಪಷ್ಟಪಡಿಸಲಾಗಿಲ್ಲ. ಮೃತದೇಹವನ್ನು ಆರೋಗ್ಯ ಕೇಂದ್ರದಿಂದ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದರು.
ವಿಧಿವಿಜ್ಞಾನ ವರದಿಯ ಆಧಾರದ ಮೇಲೆ ಸಾವಿಗೆ ಕಾರಣವನ್ನು ತಿಳಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಖನೇವಾಲ್ ಜಿಲ್ಲಾ ಪೊಲೀಸ್ ಅಧಿಕಾರಿ ಮತ್ತು ಇತರ ಹಿರಿಯ ಸಿಬ್ಬಂದಿ ಸ್ಥಳದಲ್ಲಿ ಹಾಜರಿದ್ದು, ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.ಪಾಕಿಸ್ತಾನ್ ಟ್ರಿಬ್ಯೂನ್ ತನ್ನ ವರದಿಯಲ್ಲಿ ಖ್ಯಾತ ಇಸ್ಲಾಮಿಕ್ ವಿದ್ವಾಂಸ ಮೌಲಾನಾ ತಾರಿಕ್ ಜಮೀಲ್ ಅವರ ಪುತ್ರ ಆಸಿಮ್ ತನ್ನ ಫಾರ್ಮ್ಹೌಸ್ನಲ್ಲಿ ಎದೆಗೆ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ ಎಂದು ವರದಿ ಮಾಡಿದೆ.