ದುಬೈ: ರಾಜ್ಯಾದ್ಯಂತ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಅದೇ ರೀತಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ದುಬೈನಲ್ಲಿ ಇಂದು ದುಬೈ ಕನ್ನಡ ಬಂಧುಗಳ ಜತೆ ಕನ್ನಡ ರಾಜ್ಯೋತ್ಸವ ಆಚರಿಸಿದರು.ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವವನ್ನು ಪ್ರತಿ ವರ್ಷದ ನವೆಂಬರ್ 1 ರಂದು ಆಚರಿಸಲಾಗುತ್ತದೆ.
ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ 1956ರ ನವೆಂಬರ್ 1ರಂದು ಮೈಸೂರು ರಾಜ್ಯವೆಂದು ಘೋಷಣೆ ಮಾಡಲಾಯಿತು. ಮೈಸೂರು ರಾಜ್ಯ ನಿರ್ಮಾಣವಾದುದರ ಸಂಕೇತವಾಗಿ ಪ್ರತಿ ವರ್ಷ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ವಿಶ್ವದಾದ್ಯಂತ ನೆಲಸಿರುವ ಕನ್ನಡಿಗರು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಾರೆ.