ಬೆಂಗಳೂರು;- ನವೆಂಬರ್ 4 ರಿಂದ 7ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕದಾದ್ಯಂತ ಹಲವೆಡೆ ಚಳಿ ಶುರುವಾಗಿದೆ, ಉತ್ತರ ಒಳನಾಡಿನಲ್ಲಿ ಒಣಹವೆ ಇದ್ದು, ಗರಿಷ್ಠ ಉಷ್ಣಾಂಶವು ಕೊಂಚ ಏರಿಕೆಯಾಗಿದೆ. ಹಾಗೆಯೇ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆಯಾಗುತ್ತಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರಿನಲ್ಲಿ ನವೆಂಬರ್ 4 ರಿಂದ 7ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ಕೋಲಾರ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು, ಗಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.