ಬೆಂಗಳೂರು: ನಾನೇ ಮುಖ್ಯಮಂತ್ರಿ ಆಗಿ ಮುಂದುವರಿಯಲಿದ್ದೇನೆ ಎಂಬ ಸಿದ್ದರಾಮಯ್ಯ (Siddaramaiah) ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ನಡುವೆಯೇ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾವು ಪಕ್ಷದ ಶಿಸ್ತಿನ ಸಿಪಾಯಿಗಳು. ಪಕ್ಷದ ಹೈಕಮಾಂಡ್ ಏನು ಹೇಳುತ್ತದೆಯೋ ಅದನ್ನು ಕೇಳುತ್ತೇವೆ ಅಷ್ಟೆ.
ನಾನು ಯಾವತ್ತೂ ಏನೂ ಮಾತನಾಡಿಲ್ಲ, ಮಾತನಾಡುವುದೂ ಇಲ್ಲ. ಪಕ್ಷ ಏನು ಹೇಳುತ್ತದೆಯೋ ಅದನ್ನು ಕೇಳುತ್ತೇನೆ ಎಂದು ಹೇಳಿದ್ದಾರೆ. ಸದ್ಯ ನಾನು ಮುಖ್ಯಮಂತ್ರಿಯಾಗಿದ್ದೇನೆ. ನಾನೇ ಹುದ್ದೆಯಲ್ಲಿ ಮುಂದುವರಿಯಲಿದ್ದೇನೆ. ಐದು ವರ್ಷ ಸರ್ಕಾರ ಸುಭದ್ರವಾಗಿರಲಿದೆ ಎಂದು ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಅವರ ಈ ಹೇಳಿಕೆ ಕಾಂಗ್ರೆಸ್ನಲ್ಲಿ ಮತ್ತೆ ಆಂತರಿಕ ತಲ್ಲಣಕ್ಕೆ ಕಾರಣವಾಗಿದೆ.