ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಎದುರಾಗಿರುವ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಬೇಕು. ಬಾಕಿ ಉಳಿದ ಫಲಾನುಭವಿಗಳಿಗೆ ಶೀಘ್ರ ಹಣ ತಲುಪಿಸಬೇಕು. ಇನ್ನು ಎರಡನೇ ಕಂತಿನ ಹಣವು ಹಂತ ಹಂತವಾಗಿ ಬಿಡುಗಡೆಯಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ವಿಧಾನಸೌಧದ ಕಚೇರಿಯಲ್ಲಿ ನಡೆದ ಗೃಹಲಕ್ಷ್ಮಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು,
“ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ತ್ವರಿಗತಿಯಲ್ಲಿ ಹಣ ಸಂದಾಯ ಮಾಡಬೇಕು. ತಾಂತ್ರಿಕ ಕಾರಣಗಳಿಂದ ಸಮಸ್ಯೆ ಎದುರಿಸುತ್ತಿರುವ ಫಲಾನುಭವಿಗಳ ಖಾತೆಗೆ ಶೀಘ್ರ ಹಣ ಸಂದಾಯವಾಗುವಂತೆ ಇಲಾಖೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕೆಂದು ” ಸೂಚಿಸಿದ್ದಾರೆ.ಆಗಸ್ಟ್ ತಿಂಗಳಿನಲ್ಲಿ ಶೇಕಡ 88 ರಷ್ಟು ಮಂದಿಗೆ ಹಣ ಸಂದಾಯವಾಗಿದ್ದು,
ಸೆಪ್ಟೆಂಬರ್ ತಿಂಗಳ ಹಣ ಹಂತ ಹಂತವಾಗಿ ಸಂದಾಯವಾಗುತ್ತಿದೆ. ಅಕ್ಟೋಬರ್ ತಿಂಗಳ ಹಣ ಶೇಕಡ 100ರಷ್ಟು ಫಲಾನುಭವಿಗಳಿಗೆ ಸಂದಾಯವಾಗುವಂತೆ ಮಾಡಬೇಕು ಎಂದು ಸಚಿವರು ಹೇಳಿದರು.