ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಪೂರೈಕೆ ಕೊರತೆ ಕಾಡುತ್ತಿರುವ ಹಿನ್ನೆಲೆ ಇನ್ನೂ ಕೆಲವು ತಿಂಗಳುಗಳು ಅಕ್ಕಿ ಬದಲು ಖಾತೆಗೆ ಹಣ ಹಾಕಲಾಗುವುದು ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಕೆಎಫ್ಸಿಸಿಐ) ಅಧ್ಯಕ್ಷರಾದ ರಮೇಶ್ ಚಂದ್ರ ಲಹೋಟೆಯವರು ತಿಳಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವ ಹಿನ್ನೆಲೆ ಅಕ್ಕಿ ಉತ್ಪಾದನೆಯಲ್ಲಿ ಕುಂಠಿತವಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅಂದರೇ ಶೇ.14 ರಷ್ಟು ಅಕ್ಕಿ ಉತ್ಪಾದನೆಯಲ್ಲಿ ಕುಂಠಿತವಾಗುವ ಸಾಧ್ಯತೆ ಇದೆ. ಬೇಡಿಕೆಗನುಗುಣವಾಗಿ ಅಕ್ಕಿಯನ್ನು ನೆರೆ ರಾಜ್ಯಗಳಾದ ಆಂಧ್ರ, ತೆಲಂಗಾಣದಿಂದಲೂ ಕರ್ನಾಟಕಕ್ಕೆ ಸಾಕಷ್ಟು ಪ್ರಮಾಣದಲ್ಲಿ ಪೂರೈಕೆಯಾಗುತ್ತಿಲ್ಲಾ ಎಂದರು.
ಹೀಗಾಗಿ ಅನ್ನ ಭಾಗ್ಯ ಫಲಾನುಭವಿಗಳಿಗೆ ಮುಂದಿನ ಕೆಲ ತಿಂಗಳುಗಳ ಕಾಲ ಅವರ ಖಾತೆಗೆ ಅಕ್ಕಿ ಬದಲು ಹಣ ನೀಡುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.