ಬಾಯಾರಿಕೆ ಕಡಿಮೆ ಮಾಡಲು ತಂಪು ಪಾನೀಯ ಕುಡಿಯಬೇಕು ಎನಿಸಿದಾಗ ಕೆಮಿಕಲ್ ಮಿಶ್ರಿತ ಕೂಲ್ ಡ್ರಿಂಕ್ಸ್ ಕುಡಿಯುವ ಬದಲು ನೈಸರ್ಗಿಕ ಜ್ಯೂಸ್ ಮಾಡಿ ಕುಡಿದರೆ ಬಾಯಿಗೂ ರುಚಿ, ಆರೋಗ್ಯಕ್ಕೂ ಒಳ್ಳೆಯದು. ಅದರಲ್ಲೂ ಬೇಸಿಗೆಯಲ್ಲಿ ದಾಸವಾಳ ಹೂವಿನ ಜ್ಯೂಸ್ ಕುಡಿದರೆ ಆರೋಗ್ಯಕ್ಕೆ ಒಳ್ಳೆಯದು.
ದಿನ ದಾಸವಾಳ ಹೂವಿನ ಜ್ಯೂಸ್ ಕುಡಿಯುವುದರಿಂದ ಮೊಡವೆ ಬರುವುದನ್ನು ತಡೆಯಬಹುದು. ಈ ಜ್ಯೂಸ್ ನಿಮ್ಮ ತ್ವಚೆ ಕಾಂತಿಯನ್ನೂ ಹೆಚ್ಚಿಸುತ್ತದೆ.
* ದೇಹದಲ್ಲಿ ನೀರಿನಂಶ ಕಮ್ಮಿಯಾಗದಂತೆ ನೋಡಿಕೊಳ್ಳುತ್ತದೆ. ನೀರಿನಂಶದ ಕೊರತೆಯಿಂದ ಬಳಲುತ್ತಿರುವವರು, ಡ್ರೈ ಸ್ಕಿನ್ ಇರುವವರು ಇದರ ಜ್ಯೂಸ್ ಕುಡಿಯುವುದು ಒಳ್ಳೆಯದು.
* ಹೊಟ್ಟೆ ಹಸಿವು ಸರಿಯಾದ ರೀತಿಯಲ್ಲಿ ಆಗಲು ದಾಸವಾಳವನ್ನು ತಿನ್ನುವುದು ಒಳ್ಳೆಯದು.
* ಎಣ್ಣೆಯಲ್ಲಿ ದಾಸವಾಳ ಹೂವನ್ನು ಹಾಕಿ ಕಾಯಿಸಿ, ಆ ಎಣ್ಣೆಯನ್ನು ಬಳಸಿದರೆ ಕೂದಲು ಉದುರುವ ಸಮಸ್ಯೆಯಿಂದ ಮುಕ್ತಿ ಹೊಂದಬಹುದು.
* ಶೀತ, ಕೆಮ್ಮು ಹಾಗೂ ತಲೆನೋವು ಕಾಣಿಸಿಕೊಂಡಾಗ ದಾಸವಾಳ ಹೂವನ್ನು ತಿಂದರೆ ಅಥವಾ ಟೀ ಮಾಡಿ ಕುಡಿದರೆ ತಲೆ ನೋವು ಶಮನವಾಗುತ್ತದೆ.
* ದಾಸವಾಳ ಹೂವಿನ ಜ್ಯೂಸ್ ಮಾಡಿ ಕುಡಿಯುವುದರಿಂದ ಮೊಡವೆ ಕಡಿಮೆಯಾಗುತ್ತೆ.
* ದೇಹದಲ್ಲಿ ನೀರಿನ ಅಂಶ ಕೊರತೆ ಇರುವವರು ಹಾಗೂ ಡ್ರೈ ಸ್ಕಿನ್ ಇರುವವರು ದಾಸವಾಳ ಹೂವಿನ ಜ್ಯೂಸ್ ಕುಡಿಯುವುದು ಉತ್ತಮ.