ಬೆಂಗಳೂರು: ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ. ಚಂದ್ರೇಗೌಡ ಅವರ ನಿಧನದ ಸುದ್ದಿ ಕೇಳಿ ಅತ್ಯಂತ ದುಖವಾಗಿದೆ. ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ವ್ಯಕ್ತಿತ್ವದಿಂದ ಗುರುತಿಸಿಕೊಂಡಿದ್ದ ಚಂದ್ರೇಗೌಡರು ನನ್ನ ನೆರೆ ಮನೆಯಲ್ಲಿಯೇ ಇದ್ದು ನನಗೆ ಅತ್ಯಂತ ಆತ್ಮೀಯರಾಗಿದ್ದರು.
ಕಳೆದ ತಿಂಗಳು ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದೆ, ಈಗ ಅವರು ನಮ್ಮನ್ನು ಅಗಲಿರುವುದು ಮನೆಯ ಹಿರಿಯರೊಬ್ಬರನ್ನು ಕಳೆದುಕೊಂಡಂತೆ ಆಗುತ್ತಿದೆ. ಚಂದ್ರೇಗೌಡರ ಅಗಲಿಕೆಯಿಂದ ರಾಜ್ಯ ಒಬ್ಬ ಪ್ರಾಮಾಣಿಕ ಹಿರಿಯ ನಾಯಕನನ್ನು ಕಳೆದುಕೊಂಡಂತಾಗಿದೆ.
ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗ ಹಾಗೂ ಅವರ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ.