ಬೆಂಗಳೂರು;- ಮುಂದಿನ 24 ಗಂಟೆಗಳ ಕಾಲ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ತಮಿಳುನಾಡಿನ ಕೆಲ ಭಾಗದಲ್ಲಿ ಸುಳಿಗಾಳಿ ಉಂಟಾಗಿದೆ. ಅದರ ಪರಿಣಾಮ ರಾಜ್ಯದಲ್ಲಿ ಇನ್ನೂ ಮೂರು ದಿನ ಹೆಚ್ಚಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡಿಗೆ ಮಳೆಯಾಗಲಿದೆ. ಮುಂದಿನ ವಾರ ಬಹುತೇಕ ಹಿಂಗಾರು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಪ್ರಸಾದ್ ಅವರು ತಿಳಿಸಿದ್ದಾರೆ.