ಬೆಂಗಳೂರು;- ಉದ್ಯಮಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮೂರನೇ ಆರೋಪಿ ಶ್ರೀ ಅಭಿನವ ಹಾಲಶ್ರೀ ಸ್ವಾಮೀಜಿ ಅವರಿಗೆ ಹೈಕೋರ್ಟ್ ಜಾಮೀನು ನೀಡಿದೆ.
ಉದ್ಯಮಿ ಗೋವಿಂದ ಪೂಜಾರಿ ಅವರಿಗೆ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಐದು ಕೋಟಿ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಹಿರೇಹಡಗಲಿಯ ಹಾಲ ಸ್ವಾಮಿ ಮಠದ ಶ್ರೀ ಅಭಿನವ ಹಾಲಶ್ರೀ ಸ್ವಾಮೀಜಿ ಅವರಿಗೆ ಹೈಕೋರ್ಟ್ ಜಾಮೀನು ನೀಡಿದೆ.
ಹಾಲಶ್ರೀ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ನ ಏಕದಸ್ಯ ಪೀಠ ಅಭಿನವ ಹಾಲಶ್ರೀಗಳಿಗೆ ಷರತ್ತುಬದ್ಧ ಜಾಮೀನು ನೀಡಿದೆ. ಅಭಿನವ ಹಾಲಶ್ರೀಗಳನ್ನು ಸೆಪ್ಟೆಂಬರ್ 19ರಂದು ಒಡಿಶಾದ ಕಟಕ್ನಲ್ಲಿ ಬಂಧಿಸಲಾಗಿತ್ತು