ಬೆಂಗಳೂರು: ಅಗ್ನಿಶಾಮಕ ದಳದ ಮೂಲಕ ಮಾಹಿತಿ ಪಡೆದು ಪಟಾಕಿ ಮಾರಾಟಕ್ಕೆ ಲೈಸೆನ್ಸ್ ನೀಡಲಾಗಿದೆ. ಎಲ್ಲೆಲ್ಲಿ ಮಳಿಗೆ ಹಾಕಬೇಕೆಂದು ಬಿಬಿಎಂಪಿ ಅನುಮತಿ ನೀಡಲಿದೆ.
ಬೆಂಗಳೂರಲ್ಲಿ ಒಟ್ಟು 62 ಮೈದಾನದಲ್ಲಿ 320 ಪಟಾಕಿ ಅಂಗಡಿಗಳನ್ನು ಹಾಕಲು ಪರವಾನಿಗೆ ನೀಡಲಾಗಿದೆ. 964 ಜನರು ಪಟಾಕಿ ಮಾರಾಟದ ಲೈಸೆನ್ಸ್ಗಾಗಿ ಅರ್ಜಿ ಸಲ್ಲಿಸಿದ್ದರು.
ಈ ಪೈಕಿ 263 ಜನರಿಗೆ ಲಾಟರಿ ಮೂಲಕ ಲೈಸೆನ್ಸ್ ನೀಡಲಾಗಿದೆ. ಅನಧಿಕೃತ ಪಟಾಕಿ ಮಾರಾಟ ಪತ್ತೆ ಹಚ್ಚಲು ಟಾಸ್ಕ್ಫೋರ್ಸ್ ರಚಿಸಲಾಗಿದೆ.
ಪೊಲೀಸ್, ಅಗ್ನಿಶಾಮಕ, ಬಿಬಿಎಂಪಿ ಸಹಯೋಗದಲ್ಲಿ ಟಾಸ್ಕ್ಫೋರ್ಸ್ ರಚಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ಹೇಳಿದರು.