ನವದೆಹಲಿ: ಪಸ್ತುತ ನಡೆಯುತ್ತಿರುವ 2023 ರ ಐಸಿಸಿ ವಿಶ್ವಕಪ್ನಲ್ಲಿ ಭಾರತದ ಬ್ಯಾಟರ್ ಶುಭಮನ್ ಗಿಲ್ (Shubman Gill) ವಿಶ್ವದ ನಂ. 1 ODI ಬ್ಯಾಟರ್ ಆಗಿ, ಬಾಬರ್ ಅಜಂರನ್ನು (Babar Azam) ಸಿಂಹಾಸನದಿಂದ ಕೆಳಗಿಳಿಸಿದ್ದಾರೆ.
ಬುಧವಾರ ಐಸಿಸಿ ಪುರುಷರ ODI ಬ್ಯಾಟಿಂಗ್ ಶ್ರೇಯಾಂಕ ಪಟ್ಟಿ ಪ್ರಕಟಿಸಿದ್ದು, ಮೆನ್ ಇನ್ ಬ್ಲೂ ಓಪನರ್ ಪಾಕಿಸ್ತಾನದ ನಾಯಕನ ಸ್ಥಾನವನ್ನು ಅಲಂಕರಿಸಿದ್ದಾರೆ. ಶುಭಮನ್ ಅವರು ಒಟ್ಟು 830 ರೇಟಿಂಗ್ ಪಾಯಿಂಟ್ ಹೊಂದಿದ್ದಾರೆ. ಆ ಮೂಲಕ ಬಾಬರ್ ಅವರನ್ನು ಹಿಂದಿಕ್ಕಿದ್ದಾರೆ. ಬಾಬರ್ 824 ರೇಟಿಂಗ್ನೊಂದಿಗೆ ನಂ. 2 ಸ್ಥಾನಕ್ಕೆ ಕುಸಿದಿದ್ದಾರೆ. 24 ವರ್ಷದ ಭಾರತದ ಆರಂಭಿಕ ಆಟಗಾರ ಗಿಲ್ ನವೆಂಬರ್ 2 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಉತ್ತಮ ಫಾರ್ಮ್ ಪ್ರದರ್ಶಿಸಿದರು. ಅದರೊಟ್ಟಿಗೆ ಭಾರತದ ಗೆಲುವಿಗೆ ಕೊಡುಗೆ ನೀಡಿದರು
ಕ್ಯಾಲೆಂಡರ್ ವರ್ಷದಲ್ಲಿ ಭಾರತದ ಯುವ ತಾರೆ ರೆಡ್-ಹಾಟ್ ಫಾರ್ಮ್ನಲ್ಲಿದ್ದಾರೆ. ರನ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅವರು ಈ ವರ್ಷ 26 ODIಗಳಲ್ಲಿ 63.00 ಸರಾಸರಿಯಲ್ಲಿ 1,149 ರನ್ ಗಳಿಸಿದ್ದಾರೆ. 103.72 ಸ್ಟ್ರೈಕ್ ರೇಟ್ ಹೊಂದಿದ್ದಾರೆ.
ಬಲಗೈ ಆಟಗಾರ ಶ್ರೀಲಂಕಾ ವಿರುದ್ಧ 92 ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ 23 ರನ್ ಗಳಿಸಿದ್ದಾರೆ. ನಡೆಯುತ್ತಿರುವ ಪಂದ್ಯಾವಳಿಯಲ್ಲಿ ಇದುವರೆಗೆ ಆರು ಇನ್ನಿಂಗ್ಸ್ಗಳಿಂದ ಗಿಲ್ 219 ರನ್ ಗಳಿಸಿದ್ದಾರೆ. ಪಾಕಿಸ್ತಾನದ ನಾಯಕ ವಿಶ್ವಕಪ್ನಲ್ಲಿ ಎಂಟು ಪಂದ್ಯಗಳಿಂದ 282 ರನ್ಗಳನ್ನು ಗಳಿಸಿದ್ದಾರೆ. ಕಳೆದ 2 ವರ್ಷಗಳಿಂದ ಬಾಬರ್ ಮೊದಲ ಸ್ಥಾನದಲ್ಲಿದ್ದರು