ಬೆಂಗಳೂರು: ಪ್ರತಿ ಆರು ತಿಂಗಳಿಗೊಮ್ಮೆ ಆರ್ಥಿಕ ಸ್ಥಿತಿಗತಿಗಳನ್ನು ಆಧರಿಸಿ ಹಾಲಿನ ದರ ಹೆಚ್ಚಳಕ್ಕೆ ಅನುಮತಿ ನೀಡಬೇಕು ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪಶುಸಂಗೋಪನಾ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ.
ಪ್ರತಿ ಆರು ತಿಂಗಳಿಗೊಮ್ಮೆ ಗರಿಷ್ಠ ಶೇ. 5ರವರೆಗೆ ಹಾಲಿನ ದರ ಹೆಚ್ಚಳಕ್ಕೆ ಅವಕಾಶ ನೀಡಬೇಕು. ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ಹಂತದಲ್ಲೇ ಹಾಲಿನ ದರ ಪರಿಷ್ಕರಣೆಗೆ ಅನುಮತಿ ನೀಡಬೇಕು ಎಂದು ಪ್ರಸ್ತಾವದಲ್ಲಿ ತಿಳಿಸಲಾಗಿದೆ.
ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರು ಸುದ್ದಿಗಾರರ ಜೊತೆ ಮಾತನಾಡಿ, “ಹಾಲಿನ ದರ ಏರಿಕೆ ಮಾಡುವಂತೆ ರೈತರು ಮತ್ತು ಹಾಲು ಒಕ್ಕೂಟಗಳಿಂದ ಒತ್ತಡವಿದೆ. ಆದರೆ, ಸದ್ಯಕ್ಕೆ ದರ ಹೆಚ್ಚಳ ಇಲ್ಲ” ಎಂದು ಹೇಳಿದರು.