ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿ ತನಿಷಾ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಎಸ್ ಸಿ ಎಸ್ಟಿ ಕಾಯ್ದೆಯಡಿ ಅಟ್ರಾಸಿಟಿ ಕೇಸ್ ದಾಖಲಿಸಿಲಾಗಿದೆ.ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ ಪದ್ಮಾ ಎಂಬುವರಿಂದ ದೂರು.. ಖಾಸಗಿ ವಾಹಿನಿಯ ಬಿಗ್ ಬಾಸ್ ರಿಯಾಲಿಟಿ ಶೋ ನಲ್ಲಿ ಅವಹೇಳನಕಾರಿ ಪದ ಬಳಕೆ ಆರೋಪ..
ಪದಬಳಕೆ ಮಾಡಿ ಬೋವಿ ಜನಾಂಗಕ್ಕೆ ಅವಮಾನ ಮಾಡಿದ್ದಾರೆಂದು ದೂರು.. ತನಿಷಾ ಕುಪ್ಪುಂಡ ವಿರುದ್ದ ಆರೋಪಿಸಿ ದೂರು.. ಬಿಗ್ ಬಾಸ್ ಮನೆಯಿಂದ ಹೊರ ಹಾಕಬೇಕು ಎಸ್ ಸಿ ಎಸ್ಟಿ ಕಾಯ್ದೆಡಿ ಕ್ರಮಕ್ಕೆ ಆಗ್ರಹಿಸಿ ದೂರು ಸಲ್ಲಿಸಲಾಗಿದೆ.