ನವದೆಹಲಿ: ಮುಂದಿನ 2 ಅಥವಾ 3 ದಿನಗಳ ಕಾಲ ರಾಷ್ಟ್ರ ರಾಜಧಾನಿಯ ಮಾಲಿನ್ಯ (Pollution) ಪರಿಸ್ಥಿತಿಯನ್ನು ಗಮನಿಸಲಾಗುವುದು. ಆ ಬಳಿಕ ಸಮ-ಬೆಸ ಜಾರಿ ಮಾಡುವುದು ಅಥವಾ ಕೃತಕ ಮಳೆ (Artificial Rain) ಸುರಿಸುವ ಬಗ್ಗೆ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ (Gopal Rai) ಹೇಳಿದ್ದಾರೆ.
ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ದೀಪಾವಳಿಯಿಂದ ದೆಹಲಿಯ ಗಾಳಿಯ ಗುಣಮಟ್ಟವು ‘ಅತ್ಯಂತ ಕಳಪೆ’ ವಿಭಾಗದಲ್ಲಿದೆ. ಮುಂದಿನ 2-3 ದಿನಗಳ ತಾಪಮಾನ ಮತ್ತು ಗಾಳಿಯ ವೇಗವನ್ನು ಪರಿಶೀಲಿಸಲಾಗುವುದು. ಪರಿಸ್ಥಿತಿ ಉತ್ತಮಗೊಳ್ಳುವ ನಿರೀಕ್ಷೆಯಿದೆ ಎಂದರು.
ಒಂದು ವೇಳೆ ಪರಿಸ್ಥಿತಿ ಸುಧಾರಿಸದ್ದಿದ್ದರೇ ನಾವು ಕ್ರಮಗಳ ಬಗ್ಗೆ ವಿಜ್ಞಾನಿಗಳ ಜೊತೆಗೆ ನಾವು ಮೇಲ್ವಿಚಾರಣೆ ಮಾಡುತ್ತೇವೆ. ತಜ್ಞರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಕ್ರಮ ಜರುಗಿಸಲಾಗುವುದು. ಗಾಳಿಯ ಗುಣಮಟ್ಟ ತೀವ್ರವಾಗಿ ಹದಗೆಟ್ಟರೇ ಮಾತ್ರ ಬೆಸ-ಸಮದಂತಹ ಕಠಿಣ ಕ್ರಮಗಳ ಬಗ್ಗೆ ಯೋಚಿಸಲಾಗುವುದು ಎಂದು ಹೇಳಿದರು.