ಪ್ರಧಾನಿ ಮೋದಿ, ವಿಶ್ವಕಪ್ ವಿನ್ನಿಂಗ್ ನಾಯಕ ಧೋನಿ ಹಾಗೂ ಕಪಿಲ್ ದೇವ್ ಅವರಿಗೆ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಆಹ್ವಾನಿಸಲಾಗಿದೆ.
ನ್ಯೂಜಿಲೆಂಡ್ ವಿರುದ್ದದ ಸೆಮಿಫೈನಲ್ ಪಂದ್ಯದಲ್ಲಿ ಭರ್ಜರಿ ಗೆಲವು ದಾಖಲಿಸಿದ ಟೀಂ ಇಂಡಿಯಾ ಫೈನಲ್ ಪ್ರವೇಶಿಸಿದೆ. ಸತತ 10 ಗೆಲುವು ಕಂಡಿರುವ ಭಾರತ ಇದೀಗ ಫೈನಲ್ ಪಂದ್ಯಕ್ಕೆ ಸಜ್ಜಾಗಿದೆ.
ಐಸಿಸಿ ವಿಶ್ವಕಪ್ ಫೈನಲ್ ಪಂದ್ಯ ನವೆಂಬರ್ 19 ರಂದು ಅಹಮ್ಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಹಾಜರಾಗುವ ಸಾಧ್ಯತೆಗಳಿವೆ
ಮೋದಿ ತವರು ಹಾಗೂ ಮೋದಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ. ಇತ್ತ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿ ಫೈನಲ್ ತಲುಪಿದೆ. ಹೀಗಾಗಿ ಮೋದಿ ಹಾಜರಾಗುವುದು ಬಹುತೇಕ ಖಚಿತಗೊಂಡಿದೆ.
ವಿಶ್ವಕಪ್ ಫೈನಲ್ ಪಂದ್ಯಕ್ಕೆ ಭಾರತ ವಿಶ್ವಕಪ್ ವಿನ್ನಿಂಗ್ ನಾಯಕರಾದ ಕಪಿಲ್ ದೇವ್ ಹಾಗೂ ಎಂಎಸ್ ಧೋನಿಗೆ ಆಹ್ವಾನ ನೀಡಲಾಗಿದೆ. ಮೋದಿ ಜೊತೆ ಈ ದಿಗ್ಗಜ ನಾಯಕರು ವಿಶೇಷ ಅತಿಥಿಗಳಾಗಿ ಹಾಜರಾಗಲಿದ್ದಾರೆ.
ಫೈನಲ್ ಪಂದ್ಯಕ್ಕೂ ಮುನ್ನ ಅಹಮ್ಮದಾಬಾದ್ ಕ್ರೀಡಾಂಗಣದಲ್ಲಿ ವಿಶೇಷ ವರ್ಣರಂಜಿತ ಕಾರ್ಯಕ್ರಮ ಆಯೋಜಿಸಲಾಗಿದೆ. ಹಲವು ಸೆಲೆಬ್ರೆಟಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಸಚಿನ್ ತೆಂಡೂಲ್ಕರ್ ಸೇರಿದಂತೆ ಹಲವು ದಿಗ್ಗಜ ಕ್ರಿಕೆಟಿಗರು, ಬಾಲಿವುಡ್ ಸೆಲೆಬ್ರೆಟಿಗಳು ಫೈನಲ್ ಪಂದ್ಯಕ್ಕೆ ಸಾಕ್ಷಿಯಾಗಲಿದ್ದಾರೆ. ಈಗಾಗಲೇ ಎಲ್ಲಾ ತಯಾರಿಗಳನ್ನು ಬಿಸಿಸಿಐ ಪೂರ್ಣಗೊಳಿಸಿದೆ.
ಐಸಿಸಿಯ ಅಧಿಕಾರಿಗಳು, ಬಿಸಿಸಿಐ ಅಧ್ಯಕ್ಷ, ಕಾರ್ಯದರ್ಶಿ ಸೇರಿದಂತೆ ಇತರ ಅಧಿಕಾರಿಗಳ ತಂಡ, ರಾಜಕೀಯ ಮುಖಂಡರು, ಸಚಿವರು ಸೇರಿದಂತೆ ಹಲವು ಗಣ್ಯರು ಫೈನಲ್ ಪಂದ್ಯ ವೀಕ್ಷಿಸಲು ಹಾಜರಾಗಲಿದ್ದಾರೆ.