ಬೆಂಗಳೂರು:- ನ.23ರಿಂದ 3 ದಿನ ಕರ್ನಾಟಕದಲ್ಲಿ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ.
ನ.23 ರಿಂದ ನ.26ರ ವರೆಗೆ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕೆಲವಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಕೊಡಗು ಹಾಗೂ ಚಿಕ್ಕಮಗಳೂರಿನಲ್ಲಿ ನ.23 ಹಾಗೂ 24ರಂದು ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣ ಉಷ್ಣಾಂಶ ದಾಖಲಾದ ವರದಿಯಾಗಿದೆ. ಭಾನುವಾರ ಬಾದಾಮಿ (29.1), ಬಾಗಲಕೋಟೆ (29.5), ಬೆಂಗಳೂರು ನಗರದಲ್ಲಿ (26.9) ವಾಡಿಕೆಗಿಂತ 3 ಡಿಗ್ರಿ ಸೆಲ್ಸಿಯಸ್ ಹೆಚ್ಚು ಉಷ್ಣಾಂಶ ದಾಖಲಾಗಿದೆ