ಮುಂಬೈ: ಮಹಾರಾಷ್ಟ್ರದ (Maharashtra) ಹಿಂಗೋಲಿಯಲ್ಲಿ (Hingoli) ಸೋಮವಾರ ಬೆಳಗ್ಗೆ 3.5 ತೀವ್ರತೆಯ ಭೂಕಂಪ (Earthquake) ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ. ಇಂದು ಬೆಳಗ್ಗೆ 5:09ಕ್ಕೆ 5 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆಯನ್ನು ತೋರಿಸಿದೆ. ಸದ್ಯ ಯಾವುದೇ ಹಾನಿಯ ವರದಿಯಾಗಿಲ್ಲ. ಈ ಬಗ್ಗೆ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.
ಇತ್ತೀಚೆಗೆ ದೆಹಲಿ-ಎನ್ಸಿಆರ್ ಪ್ರದೇಶದಲ್ಲಿ ಭೂಕಂಪ ಸಂಭವಿಸಿತ್ತು. ಹರಿಯಾಣದ ಫರಿದಾಬಾದ್ನಲ್ಲಿ 9 ಕಿ.ಮೀ ಆಳದಲ್ಲಿ ಕಂಪನದ ಕೇಂದ್ರಬಿಂದುವನ್ನು ಗುರುತಿಸಲಾಗಿತ್ತು. ಅಕ್ಟೋಬರ್ 3ರಂದು ದೆಹಲಿ-ಎನ್ಸಿಆರ್ ಪ್ರದೇಶದಲ್ಲಿ ಭೂಕಂಪನ ಸಂಭವಿಸಿತ್ತು. ಸ್ಥಳೀಯ ಜನರು ಭಯಭೀತರಾಗಿ ತಮ್ಮ ಮನೆ, ಕಚೇರಿಗಳಿಂದ ಹೊರಗೆ ಓಡಿದ್ದರು.