ಬೆಂಗಳೂರು: ಇಂದು ಸಂವಿಧಾನ ದಿನಾಚರಣೆ ಅಂಗವಾಗಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಪುಷ್ಪನಮನ ಸಲ್ಲಿಸಿಲಾಯಿತು.
ಸಂವಿಧಾನ ದಿನಾಚರಣೆಯ ಅಂಗವಾಗಿ ಇಂದು ಬಿಬಿಎಂಪಿ ಕೇಂದ್ರ ಕಚೇರಿಯ ಆವರಣದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು.
ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಸಂವಿಧಾನ ದಿನಾಚರಣೆಯ ಪ್ರಯುಕ್ತ ಬಿಬಿಎಂಪಿಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಭಾರತದ ಸಂವಿಧಾನ “ಪ್ರಸ್ತಾವನೆ” ಭಾಗ ವನ್ನು ಬೋಧಿಸಿದರು..
ಈ ವೇಳೆ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ. ಕೆ. ಹರೀಶ್ ಕುಮಾರ್, ವಲಯ ಆಯುಕ್ತರಾದ ಸ್ನೇಹಲ್, ವಿನೋತ್ ಪ್ರಿಯಾ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.