ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾ ಗಾಂಧಿ ಮದುವೆ ಆಗುತ್ತಿದ್ದಾರೆ. ತಾನು ಪ್ರೀತಿಸಿದ ಯುವಕನ ಜೊತೆಗೆ ಹಸೆಮಣೆ ಏರಲು ಮುಂದಾಗಿದ್ದಾರೆ.
ಸಿನಿಮಾಗಳಲ್ಲಿ ನಟಿಸಿ ಕನ್ನಡಿಗರ ಮನಗೆದ್ದಿರುವ ನಟಿ ಪೂಜಾ ಗಾಂಧಿ, ಕನ್ನಡವನ್ನು ಕಲಿತು ಭೇಷ್ ಎನಿಸಿಕೊಂಡಿದ್ದಾರೆ. ಒಂದ್ ಟೈಮ್ನಲ್ಲಿ ಕನ್ನಡದಲ್ಲಿ ಸಿಕ್ಕಾಪಟ್ಟೆ ಡಿಮ್ಯಾಂಡ್ ಹೆಚ್ಚಿಸಿಕೊಂಡಿದ್ದ ನಟಿಮಣಿ ಮತ್ತು ರಾಜಕಾರಣಕ್ಕೂ ಎಂಟ್ರಿ ಕೊಟ್ಟಿದ್ದರು. ಇದೀಗ ಕನ್ನಡಿಗನ ಕೈ ಹಿಡಿದು ಕರ್ನಾಟಕದ ಸೊಸೆ ಆಗಲು ಉತ್ತರ ಭಾರತದ ಬೆಡಗಿ ಪೂಜಾ ಗಾಂಧಿ ಮುಂದಾಗಿದ್ದಾರೆ.
ಬೆಂಗಳೂರಿನಲ್ಲಿ ಲಾಜೆಸ್ಟಿಕ್ ಕಂಪನಿ ಮಾಲೀಕ ವಿಜಯ್ ಅವರನ್ನು ವಿವಾಹವಾಗ್ತಿದ್ದಾರೆ. ಪೂಜಾ ಗಾಂಧಿ- ವಿಜಯ್ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದು, ನವೆಂಬರ್ 29ರಂದು ಬೆಂಗಳೂರಿನ ಯಲಹಂಕದಲ್ಲಿ ಮಂತ್ರ-ಮಾಂಗಲ್ಯ ಪದ್ಧತಿಯಲ್ಲಿ ಮದುವೆಯಾಗಲಿದ್ದಾರೆ.