ಉತ್ತರಾಖಂಡ್ ಸುರಂಗದಲ್ಲಿ ಸಿಲುಕಿರುವ ಎಲ್ಲಾ 41 ಕಾರ್ಮಿಕರನ್ನು ರಕ್ಷಣೆಗೆ ಎಲ್ಲರೂ ಪ್ರಾರ್ಥಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಹೈದರಾಬಾದ್ನ ಎನ್ಟಿಆರ್ ಕ್ರೀಡಾಂಗಣದಲ್ಲಿ ನಡೆದ ಕೋಟಿ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಧಾನಿ, ಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸಲು ನಾವೆಲ್ಲರೂ ಪ್ರಾರ್ಥಿಸಬೇಕಾಗಿದೆ ಎಂದಿದ್ದಾರೆ.
ಸುರಂಗದೊಳಗೆ ಸಿಲುಕಿರುವ ಕಾರ್ಮಿಕರನ್ನು ಸ್ಥಳಾಂತರಿಸಲು ಎಲ್ಲಾ ಸಂಸ್ಥೆಗಳು ಮತ್ತು ಸರ್ಕಾರ ಒಟ್ಟಾಗಿ ಶ್ರಮಿಸುತ್ತಿದೆ. ಕಾರ್ಮಿಕರನ್ನು ರಕ್ಷಿಸುವ ಪ್ರಯತ್ನಕ್ಕೆ ನೈಸರ್ಗಿಕ ಅಡೆತಡೆಗಳು ಅಡ್ಡಿಯಾಗುತ್ತಿವೆ. ಕಾರ್ತಿಕ ಪೂರ್ಣಿಮೆಯ ಶುಭ ಸಂದರ್ಭದಲ್ಲಿ ದೇವಾನುದೇವತೆಗಳಿಗೆ ಅವರೆಲ್ಲರೂ ಸುರಕ್ಷಿತೆ ಪ್ರಾರ್ಥಿಸೋಣ ಎಂದಿದ್ದಾರೆ.