ಬೆಂಗಳೂರು:- ಕಳೆದ ಹತ್ತು ವರ್ಷಗಳಿಂದ ಜಾಹೀರಾತು ಶುಲ್ಕ ಕಟ್ಟದೇ ಬಿಬಿಎಂಪಿಗೆ ವಂಚನೆ ಮಾಡಿದ ಜಾಹೀರಾತುಗಳ ಮೇಲೆ ಬಿಬಿಎಂಪಿ ನೋಟಿಸ್ ಲಗತ್ತಿಸುತ್ತಿದೆ.
ಜಾಹೀರಾತು ಶುಲ್ಕ ಪಾವತಿಸದ ಮೇಲ್ಸೇತುವೆ, ಸ್ಕೈವಾಕ್, ಬಸ್ ತಂಗುದಾಣಗಳಲ್ಲಿನ ಜಾಹೀರಾತುಗಳ ಮೇಲೆ ಬಿಬಿಎಂಪಿ ನೋಟಿಸ್ ಲಗತ್ತಿಸುತ್ತಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಬಸ್ ತಂಗುದಾಣ, ಸ್ಕೈವಾಕ್ನಲ್ಲಿ ಜಾಹೀರಾತು ಪ್ರದರ್ಶನದ ನೆಲಬಾಡಿಗೆ, ಸೇವಾ ತೆರಿಗೆಗಳು ಸೇರಿದಂತೆ ₹100 ಕೋಟಿಗೂ ಅಧಿಕ ಬಾಕಿ ಇದೆ. ಏಜೆನ್ಸಿಗಳಿಗೆ ಡಿಮ್ಯಾಂಡ್ ನೋಟಿಸ್ ನೀಡಲಾಗಿತ್ತು. ಆದರೂ ವಸೂಲಿ ಆಗಿರಲಿಲ್ಲ. ಹೀಗಾಗಿ ಬಿಬಿಎಂಪಿ ಕೆಲವೆಡೆ ಜಾಹೀರಾತು ತೆರವು ಕಾರ್ಯಾಚರಣೆ ಕೈಗೊಂಡಿದೆ. ಬಸ್ ತಂಗುದಾಣಗಳ ಮೇಲೆ ನೋಟಿಸ್ ಅಂಟಿಸುತ್ತಿದೆ.
ಯಾವುದೇ ರೀತಿಯ ಶುಲ್ಕ ಪಾವತಿಯಾಗದಿರುವುದನ್ನು ಸಹಿಸಲು ಸಾಧ್ಯವಿಲ್ಲ. ಎಲ್ಲವನ್ನೂ ವಸೂಲಿ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೇಶ್ ಮೌದ್ಗೀಲ್ ಹೇಳಿದ್ದರು.