ಬೆಂಗಳೂರು: ದೇಶದಲ್ಲಿ ನಂದಿನಿ ತುಪ್ಪಕ್ಕಿರುವ ಮಾರುಕಟ್ಟೆ ಬೆಲೆಗಿಂತ ಅರ್ಧಕ್ಕರ್ಧ ಬೆಲೆಗೆ ತಿರುಪತಿ ತಿಮ್ಮಪ್ಪನ ಲಡ್ಡು ತಯಾರಿಕೆಗೆ ತುಪ್ಪವನ್ನು ಕಳಿಸಲು ಸಾಧ್ಯವಿಲ್ಲ ಎಂದು ಕೆಎಂಎಫ್ನಿಂದ ತುಪ್ಪ ಸರಬರಾಜು ಮಾಡಿರಲಿಲ್ಲ. ಆದರೆ, ಕಳೆದ ಎರಡು ಬಾರಿಯಿಂದ ಟಿಟಿಡಿಯ ತುಪ್ಪದ ಟೆಂಡರ್ನಲ್ಲಿ ಕೆಎಂಎಫ್ ಭಾಗವಹಿಸಿದರೂ ನಂದಿನಿ ತುಪ್ಪದ ದರ ಹೆಚ್ಚಾಗಿದ್ದು, ಖರೀದಿ ಮಾಡಲು ಸಾಧ್ಯವಿಲ್ಲ ಎಂದು ತಿರುಪತಿ ತಿಮ್ಮಪ್ಪ ದೇವಸ್ಥಾನ ಆಡಳಿತ ಮಂಡಳಿ ತಿರಸ್ಕರಿಸಿದೆ.
ಈ ಮೂಲಕ ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದದಿಂದ ನಂದಿನಿ ತುಪ್ಪದ ಘಮ ಕಾಣೆಯಾಗಿದೆ.ಟೆಂಡರ್ ನಲ್ಲಿ ಟಿಟಿಡಿ ಕೇಳ್ತಿರೋ ಕಡಿಮೆ ದರಕ್ಕೆ ತುಪ್ಪ ಸರಬರಾಜು ಮಾಡಲ್ಲ ಎಂದು ಕೆಎಂಎಫ್ ಹೇಳಿತ್ತು. ಆದರೆ, ಈ ಬಾರಿ ಕಳೆದ ಬಾರಿಗಿಂತ ಕಡಿಮೆ ದರಕ್ಕೆ ನಂದಿನಿ ತುಪ್ಪವನ್ನು ಸರಬರಾಜು ಮಾಡುವುದಾಗಿ ಕೆಎಂಎಫ್ ಟಿಟಿಡಿ ಟೆಂಡರ್ನಲ್ಲಿ ಭಾಗವಹಿಸಿದ್ದರೂ ಅದಕ್ಕಿಂತ ಕಡಿಮೆ ದರದ ತುಪ್ಪವನ್ನು ಟಿಟಿಡಿ ಖರೀದಿ ಮಾಡಲು ಮುಂದಾಗಿದೆ. ಆದ್ದರಿಂದ ಕೆಎಂಎಫ್ಗೆ ಮತ್ತೆ ಹಿನ್ನಡೆ ಉಂಟಾಗಿದೆ.