ಬೆಂಗಳೂರು:- ಬಿಜೆಪಿಯವರ ಮನೆಗಳ ಮೇಲೂ ಐಟಿ ದಾಳಿ ನಡೆದರೆ ಬೇನಾಮಿ ಹಣ ದೊರೆಯಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ಸಿಗರನ್ನೇ ಗುರಿಯಾಗಿಸಿ ಯಾಕೆ ಆದಾಯ ತೆರಿಗೆ (ಐಟಿ) ದಾಳಿ ಮಾಡಲಾಗುತ್ತಿದೆ ಎಂದು ಪ್ರಶ್ನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಜೆಪಿಗರ ಮೇಲೆ ಐಟಿ ದಾಳಿಯಾದರೂ ಸಾಕಷ್ಟು ಹಣ ಸಿಗುತ್ತದೆ. ಆದರೆ ಮಾಡುತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಯಾರ ಬಳಿ ಬೇನಾಮಿ ಹಣ ದೊರೆತರೂ ಅದು ಕಾನೂನು ರೀತಿಯಲ್ಲಿ ತಪ್ಪು. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲೇ ಬೇಕು ಎಂದಿದ್ದಾರೆ
ಆದರೆ, ಯಾಕೆ ಕಾಂಗ್ರೆಸ್ ಪಕ್ಷದವರನ್ನೇ ಗುರಿಯಾಗಿಸಿಕೊಂಡು ಐಟಿ ದಾಳಿಗಳನ್ನು ಮಾಡಲಾಗುತ್ತಿದೆ. ಬಿಜೆಪಿಯವರ ಮೇಲೆ ಐಟಿ ದಾಳಿಗಳು ಆಗುತ್ತಿಲ್ಲ. ಬಿಜೆಪಿಯವರ ಮನೆಗಳ ಮೇಲೂ ಐಟಿ ದಾಳಿ ನಡೆದರೆ ಬೇನಾಮಿ ಹಣ ದೊರೆಯಬಹುದು. ಆದರೆ, ಅವರ ಮೇಲೆ ದಾಳಿ ಮಾಡುತ್ತಿಲ್ಲ ಎಂದು ತಿಳಿಸಿದ್ದಾರೆ.