ಬೆಂಗಳೂರು:- ಕಾಂಗ್ರೆಸ್ ನ ಪಂಚ ಗ್ಯಾರಂಟಿಗಳ ಪೈಕಿ ಕೊನೆಯ ಗ್ಯಾರಂಟಿಯಾದ ‘ಯುವನಿಧಿ’ ಯೋಜನೆಗೆ ಜನವರಿಯಲ್ಲಿ ಚಾಲನೆ ನೀಡಲಿದ್ದು, ಡಿಸೆಂಬರ್ ಮಾಸಾಂತ್ಯದ ವೇಳೆಗೆ ನೋಂದಣಿ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣ ಪ್ರಕಾಶ್ ಪಾಟೀಲ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಯುವ ನಿಧಿ ಕಾರ್ಯಕ್ರಮ ಅರ್ಜಿ ಸಲ್ಲಿಸಲು ಡಿಸೆಂಬರ್ 21 ರಿಂದ ಅವಕಾಶ ನೀಡಲಾಗಿದ್ದು ಜನವರಿಯಿಂದ ಯುವನಿಧಿ ಯೋಜನೆ ಚಾಲನೆ ನೀಡಲಾಗುವುದು ಹಾಗೆ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಐದನೇ ಗ್ಯಾರಂಟಿಗೆ ಮುಹೂರ್ತ ನಿಗದಿಯಾಗಿದೆ.
ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ಘೋಷಿಸಲಾಗಿದ್ದ 5 ಗ್ಯಾರಂಟಿ ಯೋಜನೆಗಳ ಪೈಕಿ ಈಗಾಗಲೆ ಸರ್ಕಾರವು 4 ಗ್ಯಾರಂಟಿ ಯೋಜನೆಗಳನ್ನು ವ್ಯವಸ್ಥಿತವಾಗಿ ಜಾರಿಗೊಳಿಸಿದೆ. ಇದೀಗ 5ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಜಾರಿಗೆ ಎಲ್ಲ ಸಿದ್ಧತೆ ಮಾಡಿಕೊಂಡಿದೆ ಎಂದು ಗೊತ್ತಾಗಿದೆ.