ತಿರುವನಂತಪುರಂ: ಅಯ್ಯಪ್ಪನ ದರ್ಶನಕ್ಕೆಂದೇ 48 ದಿನಗಳವರೆಗೂ ವ್ರತ ಆಚರಿಸಿ ಶಬರಿಮಲೆಗೆ ತೆರಳಿದ್ದ ಕರ್ನಾಟಕ ಸೇರಿ ಹಲವು ರಾಜ್ಯಗಳ ಭಕ್ತರು, ಅಯ್ಯಪ್ಪನ ದರ್ಶನ ಮಾಡಲಾಗದೆಯೇ ಮರಳುತ್ತಿದ್ದಾರೆ. ಭಕ್ತರ ನಿರ್ವಹಣೆ, ಭಕ್ತರ ವಾಹನಗಳ ನಿರ್ವಹಣೆಯಲ್ಲಿ ಟ್ರಾವಂಕೂರು ದೇವಸ್ಥಾನ ಮಂಡಳಿ ಮತ್ತು ಪೊಲೀಸರು ಪೂರ್ಣ ವಿಫಲರಾಗಿದ್ದು,
ಕೇರಳ ಸರ್ಕಾರದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ದೇವರ ದರ್ಶನಕ್ಕೆ ಭಕ್ತರು ಹಲವು ಗಂಟೆಗಳ ಕಾಲ ಅನ್ನ, ನೀರು ಇಲ್ಲದೇ ಸರದಿಯಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಎದುರಾಗಿದೆ. ಅವ್ಯವಸ್ಥೆ ಪ್ರಶ್ನಿಸಿದ್ದಕ್ಕೆ ಪೊಲೀಸರು ಭಕ್ತರ ಮೇಲೆಯೇ ಹಲ್ಲೆ ನಡೆಸಿದ್ದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡುತ್ತಿದೆ.