ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿರುದ್ಧ ಆಕ್ಷೇಪಾರ್ಹ ಲೇಖನ ಪ್ರಕಟಿಸಿದ್ದಕ್ಕೆ ಶಿವಸೇನೆ (Shiv Sena) ಉದ್ದವ್ ಠಾಕ್ರೆ (Uddhav Thackeray) ಬಣದ ನಾಯಕ ಸಂಜಯ್ ರಾವತ್ (Sanjay Raut) ವಿರುದ್ಧ ದೇಶದ್ರೋಹದ (Sedition) ಪ್ರಕರಣ ದಾಖಲಾಗಿದೆ.
ಪಕ್ಷದ ಮುಖವಾಣಿ ಸಾಮ್ನಾದಲ್ಲಿ (Saamana) ಡಿ.11 ರಂದು ಪ್ರಕಟವಾದ ಲೇಖನ ದೂರುದ್ದೇಶದಿಂದ ಕೂಡಿದೆ ಎಂದು ಆರೋಪಿಸಿ ಬಿಜೆಪಿ ಯವತ್ಮಾಲ್ ಸಂಚಾಲಕ ನಿತಿನ್ ಭೂತಾಡ್ ದೂರು ನೀಡಿದ್ದರು. ಉಮರಖೇಡ್ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದ್ದು, ದೂರಿನ ಪ್ರಕಾರ ನಾವು ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ ಮತ್ತು ಅದರ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.